ಮಂಗಳೂರು : SSLCಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಜೆಪ್ಪುವಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಅನಿಶ್ ಎಂದು ಗುರುತಿಸಲಾಗಿದೆ.
ಅನಿಶ್ ಜೆಪ್ಪು ಕುಡುಪಾಡಿ ನಿವಾಸಿಯಾಗಿದ್ದು SSLCಯಲ್ಲಿ ವ್ಯಾಸಂಗ ಮಾಡಿಕೊಂಡಿದ್ದ, ಈತನ ತಂದೆ ಪ್ರಶಾಂತ್ ಪಾಯಲ್ ಮೂರು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ತಂದೆಯನ್ನು ಕಳೆದುಕೊಂಡ ಬಳಿಕ ಅನಿಶ್ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಹೀಗಾಗಿಯೇ ಆತ್ಮಹತ್ಯೆಗೆ ಶರಣಾಗಿರಬೇಕು ಎಂದು ಶಂಕಿಸಲಾಗಿದೆ.
ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post