ಉಳ್ಳಾಲ : ಮಾವಿನಕಾಯಿ ಕೀಳಲು ಮರ ಹತ್ತಿದ ಯುವಕನೊಬ್ಬ ವಿದ್ಯುತ್ ತಂತಿ ತಗುಲಿ ಮರದಲ್ಲೇ ಮೃತಪಟ್ಟಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉಳ್ಳಾಲ ಜಲಾಲ್ ಬಾಗ್ ನಲ್ಲಿ ಶುಕ್ರವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಮಹಮ್ಮದ್ ಇಲಿಯಾಸ್ (21) ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ ಮನೆ ಸಮೀಪದ ಮಾವಿನ ಮರಕ್ಕೆ ಹಣ್ಣು ಕೀಳಲೆಂದು ಹತ್ತಿದ್ದರು. ಈ ವೇಳೆ ಮಾವಿನ ಮರದ ಮೇಲೆಯೇ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ದುರ್ಘಟನೆ ಸಂಭವಿಸಿದೆ ಅನ್ನಲಾಗಿದೆ.
Discussion about this post