ಮೇಷ
ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.
ಶುಭ ಸಂಖ್ಯೆ : 6
ವೃಷಭ
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವದು.
ಶುಭ ಸಂಖ್ಯೆ : 8
ಮಿಥುನ
ಆದಾಯ ಹೆಚ್ಚುವದು. ವ್ಯವಹಾರಿಕ ಏಳ್ಗೆ ಇರುವದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು.
ಶುಭ ಸಂಖ್ಯೆ : 3
ಕರ್ಕ
ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಶುಭ ಸಂಖ್ಯೆ : 1
ಸಿಂಹ
ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವದು.
ಶುಭ ಸಂಖ್ಯೆ : 4
ಕನ್ಯಾ
ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು.
ಶುಭ ಸಂಖ್ಯೆ : 7
ತುಲಾ
ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ.
ಶುಭ ಸಂಖ್ಯೆ : 9
ವೃಶ್ಚಿಕ
ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವದು. ಮನೆಯಲ್ಲಿ ನೆಮ್ಮದಿ ಇರುವದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವದು.
ಶುಭ ಸಂಖ್ಯೆ : 3
ಧನು
ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚುಬರಬಹುದು.
ಶುಭ ಸಂಖ್ಯೆ : 1
ಮಕರ
ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು.
ಶುಭ ಸಂಖ್ಯೆ : 5
ಕುಂಭ
ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವದು.
ಶುಭ ಸಂಖ್ಯೆ : 6
ಮೀನ
ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವದು. ಹಣಕಾಸಿನ ವಿಷಯದಲ್ಲಿ
ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು.
ಶುಭ ಸಂಖ್ಯೆ : 9
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937
Discussion about this post