ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 10 ಜನ ಮೃತಪಟ್ಟಿರುವ ಘಟನೆ ಗುಜರಾತ್ನ ಆನಂದ ಜಿಲ್ಲೆಯಲ್ಲಿ ನಡೆದಿದೆ.
ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು ಕಾರು ಟ್ರಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆನಂದ ಜಿಲ್ಲೆಯ ತಾರಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು ಘಟನೆ ನಡೆದ ತಕ್ಷಣ ತಾರಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕಾರು ಸೂರತ್ನಿಂದ ವಾಟಾಮನ್ ಗೆ ತೆರಳುತ್ತಿತ್ತು. ಟ್ರಕ್ ವಾಟಾಮನ್ ಕಡೆಯಿಂದ ಬರುತ್ತಿತ್ತು ಎಂದು ಗೊತ್ತಾಗಿದೆ. ಮೃತರಲ್ಲಿ ಇಬ್ಬರು ಮಹಿಳೆಯರು, 7 ಮಂದಿ ಪುರುಷರು ಹಾಗೂ ಒಂದು ಮಗು ಎಂದು ಗುರುತಿಸಲಾಗಿದೆ.
ಘಟನೆ ಸಂಬಂಧ ತಕ್ಷಣ ಎಚ್ಚೆತ್ತಿರುವ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಮೃತರ ಕುಟುಂಬಸ್ಥರಿಗೆ ಸಹಾಯ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಪ್ರಧಾನ ಮಂತ್ರಿ ಸಚಿವಾಲಯ ಕೂಡಾ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದೆ.
Discussion about this post