ಮಹಾರಾಷ್ಟ್ರ: ಕರ್ನಾಟಕದ ವಿವಿಧ ಭಾಗ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯ ಅಬ್ಬರ ತೀವ್ರವಾಗಿದೆ. ಈ ನಡುವೆ ಮುಂಬೈನಲ್ಲೂ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಶನಿವಾರದಿಂದ ಮುಂಬೈಯ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಶನಿವಾರ ರಾತ್ರಿ ನಿರೀಕ್ಷೆಗೂ ಮೀರಿದ ಮಳೆಯಾಗಿದೆ.ಈ ಮಳೆಯಿಂದಾಗಿ ಮಹುಲ್ ಪ್ರದೇಶದ ಭಾರತ್ ನಗರದಲ್ಲಿ ಭೂಕುಸಿತ ಉಂಟಾಗಿದ್ದು, ಮನೆಗಳ ಗೋಡೆ ಕುಸಿದು 12 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಮುಂಬೈ ಒಂದರಲ್ಲೇ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಮುಂಬೈನ ವಿಕ್ರೋಲಿ ಉಪನಗರದಲ್ಲಿ ಮುಂಜಾನೆ 2.30ಕ್ಕೆ ಭೂಕುಸಿತ ಸಂಭವಿಸಿದ್ದು. 5 ಗುಡಿಸಲುಗಳು ಕುಸಿದು ಬಿದ್ದಿದೆ. ಇನ್ನು ಅವಶೇಷಗಳ ಅಡಿಯಲ್ಲಿ ಹಲವಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಹಾಗೂ ಅಗ್ನಿಶಾಮಕ ದಳ ಕಾರ್ಯಾಚರಣೆ ಮುಂದುವರಿಸಿದೆ. ಈ ನಡುವೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿಗಳು ಘೋಷಿಸಿದ್ದಾರೆ.
ಈ ನಡುವೆ ಮುಂಜಾಗ್ರತ ಕ್ರಮವಾಗಿ ಉಪನಗರ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ.
Discussion about this post