ಇಸ್ಲಮಾಬಾದ್ : ಪಾಕಿಸ್ತಾನದ ಬಲೂಚಿಸ್ತಾನ್ ನಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 300 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.
ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆ ದಾಖಲಾಗಿದ್ದು, ಹರ್ನಾಯ್ ಜಿಲ್ಲೆಯ 15 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ. ಭೂಮಿ ಕಂಪಿಸಿದ ಬೆನ್ನಲ್ಲೇ ಹರ್ನಾಯ್ ಜಿಲ್ಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಭೂಮಿ ಕಂಪಿಸಿದ ಪರಿಣಾಮ ಹಲವು ಕಟ್ಟಡಗಳಿಗೆ ಹಾನಿಯಾಗಿದ್ದು, ಸಾವನ್ನಪ್ಪಿದವರ ಪೈಕಿ ಹೆಚ್ಚಿನವರು ಮಕ್ಕಳು ಮತ್ತು ಮಹಿಳೆಯರು ಎಂದು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳು ಹೇಳಿದ್ದಾರೆ.
ಪಾಕಿಸ್ತಾನದಲ್ಲಿ 2005ರ ಅಕ್ಟೋಬರ್ 8 7.6 ತೀವ್ರತೆಯಲ್ಲಿ ಭೂಕಂಪ ಸಂಭವಿಸಿತ್ತು ಆಗ 73 ಸಾವಿರ ಮಂದಿ ಮೃತಪಟ್ಟಿದ್ದರು. 2015 ರ ಅಕ್ಟೋಬರ್ನಲ್ಲಿ ಪಾಕಿಸ್ತಾನ ಸಂಭವಿಸಿದ ಭೂಕಂಪದಲ್ಲಿ 400 ಮಂದಿ ಮೃತಪಟ್ಟಿದ್ದರು.
t least 20 people were killed and over 300 others injured after a powerful 5.9 magnitude earthquake jolted a mountainous part of Pakistan’s Balochistan province early on Thursday, October 7, 2021, collapsing several houses .
Discussion about this post