Advertisements

ಜೈಜಗದೀಶ್ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

ಚಿತ್ರನಟ ಜೈಜಗದೀಶ್​ ಅವರ ಕಾರು ಅಪಘಾತವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸೋಮವಾರಪೇಟೆಯಿಂದ ಬೆಂಗಳೂರಿಗೆ ಹೊರಟಿದ್ದ ಅವರು, ತಾವೇ ಕಾರ್ ಡ್ರೈವ್ ಮಾಡಿಕೊಂಡು ಬರುತ್ತಿದ್ದರು. ಈ ವೇಳೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದೆ.

ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಜೈಜಗದೀಶ್ ಅವರ ತಲೆ ಹಾಗೂ ಮುಖಕ್ಕೆ ತೀವ್ರ ಪೆಟ್ಟಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಜೈ ಜಗದೀಶ್ ನನಗೇನು ಆಗಿಲ್ಲ, ಆರೋಗ್ಯವಾಗಿದ್ದೇನೆ ಚೆನ್ನಾಗಿದ್ದೇನೆ. ಆಸ್ಪತ್ರೆಗೆ ಯಾರು ಬರಬೇಡಿ ಎಂದು ಕೋರಿದ್ದಾರೆ.

Advertisements

Leave a Reply

%d bloggers like this: