Advertisements

ಕೇರಳಕ್ಕೆ 500 ಕೋಟಿ ಮಧ್ಯಂತರ ಪರಿಹಾರ ಘೋಷಿಸಿದ ಮೋದಿ

ದೇವರನಾಡಿನಲ್ಲಿ ದೇವರು ಮುನಿದಿದ್ದಾನೆ. ಅಬ್ಬರಿಸುತ್ತಿರುವ ಮಳೆಗೆ ನೂರಾರು ಮಂದಿ ಬಲಿಯಾಗಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ.

ಈ ನಡುವೆ ನಿನ್ನೆ ರಾತ್ರಿ ಕೇರಳ ತಲುಪಿರುವ ಪ್ರಧಾನಿ ನರೇಂದ್ರ ಮೋದಿ ಮುಂಗಾರು ಮಳೆಯಿಂದ ಹಾನಿಯಾಗಿರುವ ಪ್ರದೇಶವನ್ನು ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲನೆ ನಡೆಸಿದ್ದಾರೆ.

ಈ ನಡುವೆ ಕೇರಳ ಸರ್ಕಾರ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಕೇರಳ ರಾಜ್ಯಕ್ಕೆ ರೂ.500 ಕೋಟಿ ಮಧ್ಯಂತರ ಪರಿಹಾರ ಘೋಷಿಸಿದ್ದಾರೆ. ಜೊತೆಗೆ ಮೃತಪಟ್ಟ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.

ಕೇರಳದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಒಂದೇ ದಿನದಲ್ಲಿ 106 ಮಂದಿ ಪ್ರಾಣ ತೆತ್ತಿದ್ದಾರೆ. ಆಗಸ್ಟ್ 8ರಿಂದ ಈ ವರೆಗೆ ಮಳೆ, ಪ್ರವಾಹ ಹಾಗೂ ಭೂ ಕುಸಿತಕ್ಕೆ ಬಲಿಯಾದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ. ಮಳೆಗಾಲ ಆರಂಭವಾದಾಗಿನಿಂದ ಈವರೆಗೂ 324 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದ 14 ಜಿಲ್ಲೆಗಳು ಅಪಾಯದಲ್ಲಿದ್ದುಸ ಅದರಲ್ಲಿ 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೀಗ ಪಠಾಣಂತಿಟ್ಟ, ಅಲಪ್ಪುಳ್ಳ, ಎರ್ನಾಕುಲಂ ಹಾಗೂ ತ್ರಿಶೂರ್ ಕೂಡಾ ಅಪಾಯದ ಅಂಚಿಗೆ ಬಂದು ನಿಂತಿದೆ.

Advertisements

Leave a Reply

%d bloggers like this: