Advertisements

ರಮ್ಯರನ್ನು ಕೆಲಸದಿಂದ ಕಿತ್ತು ಹಾಕಿದ್ರಂತೆ ರಾಹುಲ್…!

ನೀವು Observe ಮಾಡಿದ್ರೋ..ಇಲ್ವೋ ಗೊತ್ತಿಲ್ಲ, ಇತ್ತೀಚೆಗೆ ಚಂದನವನದ ಮೋಹಕ ತಾರೆ, ಮಾಜಿ ಸಂಸದೆ, ಎಐಸಿಸಿ ಸಾಮಾಜಿಕ ಜಾಲ ತಾಣಗಳ ಮುಖ್ಯಸ್ಥೆ ರಮ್ಯ ಸೈಲೆಂಟ್ ಆಗಿದ್ದಾರೆ. ಒಂದಲ್ಲ ಒಂದು ಟ್ವೀಟ್ ಮೂಲಕ ಸುದ್ದಿಯಾಗುತ್ತಿದ್ದ ದಿವ್ಯ ಸ್ಪಂದನ ಟ್ವೀಟ್ ಗಳ ದೂರವುಳಿದಿದ್ದಾರೆ. ಏನಿದ್ದರೂ ಅವರೀಗ ರೀ ಟ್ವೀಟ್ ಮಾಡುವುದಕ್ಕೆ ಸೀಮಿತರಾಗಿದ್ದಾರೆ.

ಮೂಲಗಳ ಮಾಹಿತಿ ಪ್ರಕಾರ ರಮ್ಯ ಅವರು ಸಾಮಾಜಿಕ ಜಾಲ ತಾಣಗಳ ಮುಖ್ಯಸ್ಥೆ ಅನ್ನುವ ಹುದ್ದೆಯಿಂದ ಕೆಳಗಿಳಿದಿದ್ದಾರಂತೆ..ಅಲ್ಲ ಕೆಳಗಿಳಿಸಿದ್ದಾರಂತೆ. ಹೀಗಾಗಿಯೇ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾದ ಬಳಿಕ ಸುಂಟರಗಾಳಿಯಂತೆ ಟ್ವೀಟ್ ಗಳನ್ನು ಮಾಡುತ್ತಿದ್ದ ಮಾಜಿ ಸಂಸದೆ, ನಟಿ ಹಾಗೂ ರಾಜಕಾರಣಿ ರಮ್ಯಾ ರೀ ಟ್ವೀಟ್ ಕೆಲಸಕ್ಕೆ ಕೂತಿದ್ದಾರೆ.

ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾದ ವೇಳೆ ಅನಗತ್ಯವಾಗಿ ಟ್ವೀಟ್ ಮಾಡಬಾರದು ಹಾಗೂ ರಾಹುಲ್ ಗಾಂಧಿಗೆ ಸಂಬಂಧಪಟ್ಟ ಸುದ್ದಿಗಳನ್ನು ಟ್ವೀಟ್ ಮಾಡದಂತೆ ಸೂಚ ನೀಡಲಾಗಿತ್ತು. ಆದರೆ ರಮ್ಯಾ ಇದನ್ನು ಪಾಲಿಸಿರಲಿಲ್ಲ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಟ್ವೀಟ್ ಮಾಡಿ ಬಹಳಷ್ಟು ಬಾರಿ ಎಡವಟ್ಟು ಮಾಡಿಕೊಂಡಿದ್ದರು. ಇದು ಕಾಂಗ್ರೆಸ್ ಮುಜುಗರಕ್ಕೆ ಕಾರಣವಾಗಿತ್ತು. ಹೀಗಾಗಿ ರಮ್ಯ ಕೆಲಸದ ಬಗ್ಗೆ ಮುನಿಸಿಕೊಂಡಿರುವ ನಾಯಕರು ರಮ್ಯಾಗೆ ಅಂಕುಶ ಹಾಕುವಂತೆ ಸಲಹೆ ನೀಡಿದ್ದರು.

ಜಯಲಲಿತಾ ಪಾತ್ರಕ್ಕೆ ನ್ಯಾಯ ಒದಗಿಸಬಲ್ಲ ಕರಾವಳಿ ಕುವರಿ ಯಾರು..?

ರಮ್ಯಾ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆಯುವಂತೆ ಸಲಹೆ ನೀಡಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಇದರಿಂದಾಗಿ ರಮ್ಯ ಬದಲಿಗೆ ರಾಜಸ್ಥಾನದ ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ ಅವರ ಪುತ್ರ ನಿಖಿಲ್ ಜೆ ಆಳ್ವಾ ಅವರಿಗೆ ಸಾಮಾಜಿಕ ಜಾಲತಾಣಗಳ ಜವಾಬ್ದಾರಿ ವಹಿಸಲಾಗಿದೆಯಂತೆ. ನಿಖಿಲ್ ಮಾಧ್ಯಮಕ್ಕೆ ಸಂಬಂಧಿಸಿದ ಸಂಸ್ಥೆಯನ್ನು ಮುನ್ನಡೆಸಿದ ಅನುಭವ ಹೊಂದಿದ ವ್ಯಕ್ತಿ ಅನ್ನುವುದು ಇಲ್ಲಿ ಗಮನಾರ್ಹ.

ಹೀಗಾಗಿ ರಮ್ಯ ಮೇಡಂ ಕೆಲಸವಿಲ್ಲದೆ ಕೂರುವಂತಾಗಿದೆ.

Ramya2Ramya4

Advertisements

2 Comments on “ರಮ್ಯರನ್ನು ಕೆಲಸದಿಂದ ಕಿತ್ತು ಹಾಕಿದ್ರಂತೆ ರಾಹುಲ್…!

  1. Pingback: ಸಿಧು ಸಹಾಯಕ್ಕೆ ಪಾಕಿಸ್ತಾನದ ನೂತನ ಪ್ರಧಾನಿಯೇ ಬರಬೇಕಾಯ್ತು

  2. Pingback: ನಾನು ರಾಜಿನಾಮೆ ಕೊಟ್ಟಿಲ್ಲ..ರಜೆಯಲ್ಲಿದ್ದೇನೆ…. – torrentspree

Leave a Reply

%d bloggers like this: