Advertisements

ದರ್ಶನ್ ಕಾರು ಅಪಘಾತ – ದೇವರಾಜ್, ಪ್ರಜ್ವಲ್ ದೇವರಾಜ್ ಗೆ ಗಾಯ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಸೋಮವಾರ ನಸುಕಿನ ಜಾವ ಮೈಸೂರು ಬಳಿ ಅಪಘಾತಕ್ಕೀಡಾಗಿದ್ದು ಅವರ ಕೈ ಮುರಿದಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಅವರ ಜೊತೆ ಪ್ರಯಾಣಿಸುತ್ತಿದ್ದ ಹಿರಿಯ ನಟ ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ಮತ್ತೊಬ್ಬರು ಸಹ ಪ್ರಯಾಣಿಸುತ್ತಿದ್ದರು.
ಬೆಳಿಗ್ಗೆ ಸುಮಾರು ಮೂರು ಗಂಟೆಯ ಸಮಯದಲ್ಲಿ ಅಪಘಾತ ನಡೆದಿದ್ದು, ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ಮೂವರಿಗೂ ಗಾಯವಾಗಿದ್ದು, ಮೈಸೂರಿನ ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತ ಸುದ್ದಿ ಕೇಳುತ್ತಿದ್ದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ, ಬಂಧುಗಳು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ.

2018-09-24_8-10-26

ದರ್ಶನ್ ಅವರೇ ಕಾರು ಚಾಲನ ಮಾಡುತ್ತಿದ್ದರು ಎನ್ನಲಾಗಿದ್ದು, ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದ್ದು, ದರ್ಶನ್ ಅವರು ಒಡೆಯ ಚಿತ್ರದ ಶೂಟಿಂಗ್ ಮುಗಿಸಿ ವಾಪಸ್ ಬರುತ್ತಿದ್ದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Advertisements

Leave a Reply

%d bloggers like this: