Advertisements

ಕಿಚ್ಚನ ಬಿಗ್ ಬಾಸ್ ಮನೆಯ ಗೃಹ ಪ್ರವೇಶಕ್ಕೆ ಮುಹೂರ್ತ ಫಿಕ್ಸ್

ಕನ್ನಡದ ಅತಿ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನ 6ನೇ ಆವೃತ್ತಿ ಅಕ್ಟೋಬರ್ 21ರಂದು ಆರಂಭವಾಗಲಿದೆ.

ಬಿಗ್ ಬಾಸ್ ಹೊಸ ಸೀಸನ್ ಗೆ ಕಿಚ್ಚಿನಿಂದ ಕಿಚ್ಚ ತಯಾರಿಯಾಗಿದ್ದಾರೆ ಎಂದು ಖಾಸಗಿ ವಾಹಿನಿ ಪ್ರಕಟಿಸಿದೆ. ಈಗಾಗಲೇ ಕನ್ನಡದಲ್ಲಿ 5 ಆವೃತ್ತಿಗಳನ್ನು ಪೂರೈಸಿರುವ ಬಿಗ್ ಬಾಸ್ ಅನೇಕ ಹಿರಿ-ಕಿರಿತೆರೆ ಕಲಾವಿದರಿಗೆ ವೇದಿಕೆಯಾಗಿತ್ತು. ಈ ರಿಯಾಲಿಟಿ ಶೋ ಮೂಲಕವೇ ಹಲವು ಕಲಾವಿದರು ಇನ್ನಷ್ಟು ಜನಪ್ರಿಯತೆ ಗಳಿಸಿದ್ದರು.

ಕಳೆದ ಸೀಸನ್ ನಲ್ಲಿ ಸಾಮಾನ್ಯ ವ್ಯಕ್ತಿಗಳಿಗೆ ಸಹ ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಕಲ್ಪಿಸಿ ಸುದ್ದಿಯಾಗಿತ್ತು. ಈ ಸೀಸನ್ ನಲ್ಲಿ ಕೂಡ ಸಾಮಾನ್ಯ ಸ್ಪರ್ಧಿಗಳು ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ

8 ಎಮ್ಮೆ ಮಾರಿ ದೇಶಕ್ಕೆ 23 ಲಕ್ಷ ರೂಪಾಯಿ ಸಂಗ್ರಹಿಸಿದ ಇಮ್ರಾನ್ ಖಾನ್

ಈ ಬಾರಿ ಬಿಗ್‍ಬಾಸ್ ಶೋನಲ್ಲಿ ಭಾಗವಹಿಸುವ ಸ್ಪರ್ಧಿಗಳ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆರ್.ಜೆ ರ್‍ಯಾಪಿಡ್ ರಶ್ಮಿ, ರ್‍ಯಾಪರ್ ಚಂದನ್ ಶೆಟ್ಟಿಯ `ಟಕೀಲಾ’ ಹಾಡಿನಲ್ಲಿ ಸೊಂಟ ಬಳುಕಿಸಿರುವ ಶಾಲಿನಿ, ಸ್ಯಾಂಡಲ್‍ವುಡ್ ನಟಿ ಭಾವನ ಮತ್ತು ಸುಮನ್ ರಂಗನಾಥ್ ಇದರಲ್ಲಿ ಸೇರಿದೆ.

ಇದರೊಂದಿಗೆ ಶುಭಪುಂಜಾ, ನಟ ಟೆನ್ನಿಸ್ ಕೃಷ್ಣ, ಪುಟ್ಟಗೌರಿ ಖ್ಯಾತಿಯ ಶಿವರಂಜಿನಿ, ನಟ ಅನಿರುದ್ದ್, ಮುಂಗಾರು ಮಳೆ – 2 ನೇಹಾಶೆಟ್ಟಿ, ಸಿಲ್ಲಿಲಲ್ಲಿ ರವಿಶಂಕರ್, ಸರಿಗಮಪ ಚೆನ್ನಪ್ಪ, ನಟ ಅಚ್ಯುತ್ ಕುಮಾರ್, ಕಿರಿಕ್ ಪಾರ್ಟಿ ಚಂದನ್ ಆಚಾರ್, ನಟಿ ಮಯೂರಿ, ತಿಥಿ ಸಿನಿಮಾ ಖ್ಯಾತಿಯ ಅಭಿ, ಡಾ. ಶಂಕರೇಗೌಡ ಅವರನ್ನು ಕೂಡಾ ನೆಟ್ಟಿಗರು ಬಿಗ್ ಬಾಸ್ ಮನೆಗೆ ಆಯ್ಕೆ ಮಾಡಿದ್ದಾರೆ.

ಆದರೆ ಕಲರ್ಸ್ ವಾಹಿನಿಯವರೂ ಇನ್ನೂ ಏನು ಹೇಳಿಲ್ಲ…ಹೇಳುವುದೂ ಕೂಡಾ ಇಲ್ಲ.

Advertisements

Leave a Reply

%d bloggers like this: