Advertisements

ಮುಖ್ಯಮಂತ್ರಿಗಳಿಗೆ ಅಧಿಕಾರ ಹಂಚಿಕೆ ಸೂತ್ರದ ಪಾಠ ಮಾಡಿದ ಕೆಪಿಸಿಸಿ ಅಧ್ಯಕ್ಷರು

ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಮಲತಾಯಿ ಮಕ್ಕಳಂತೆ ಕಾಣಲಾಗುತ್ತಿದೆ ಆರೋಪ ಇಂದು ನಿನ್ನೆಯದಲ್ಲ. ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ಇದನ್ನು ನಿರ್ಲಕ್ಷ್ಯ ಮಾಡಲಾಗಿತ್ತು. ಆದರೆ ಯಾವಾಗ ಉಪಚುನಾವಣೆ ಬಿಸಿ ಕಾವೇರತೊಡಗಿತೋ…ಕಾರ್ಯಕರ್ತರ ಆಕ್ರೋಶದ ಬಿಸಿ ಪಕ್ಷದ ನಾಯಕರಿಗೆ ತಟ್ಟಿದೆ. ಇನ್ನು ಸುಮ್ಮನಿದ್ದರೆ ಕಾರ್ಯಕರ್ತರು ಕೈ ಕೊಡುವುದು ಗ್ಯಾರಂಟಿ ಅನ್ನುವುದು ಅರ್ಥವಾಗಿದೆ.

ಹೀಗಾಗಿ ಆಗಿರುವ ಎಡವಟ್ಟನ್ನು ಅದನ್ನು ಸರಿಪಡಿಸಲು ಕಾಂಗ್ರೆಸ್ ಮುಂದಾಗಿದೆ. ಸರ್ಕಾರದಲ್ಲಿ ಕಾಂಗ್ರೆಸ್‌ ಸಚಿವರು, ಮುಖಂಡರು ಕಾರ್ಯಕರ್ತರಿಗೆ ಮಾನ್ಯತೆ ದೊರೆಯುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

ಸಂಪುಟ ರಚನೆ, ನಿಗಮ ಮಂಡಳಿ ನೇಮಕ, ತಾಲೂಕು ಹಾಗೂ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಾಗ 2:1 ರ ಅನುಪಾತದಲ್ಲಿ ನೇಮಕ ಮಾಡಬೇಕೆಂಬ ಒಪ್ಪಂದದಂತೆ ಅಕ್ರಮ-ಸಕ್ರಮ, ಭೂ ನ್ಯಾಯಮಂಡಳಿ ಸೇರಿದಂತೆ ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳನ್ನು ಹೊಸದಾಗಿ ರಚಿಸಬೇಕಿದೆ.

ಈ ಸಮಿತಿ ರಚಿಸುವ ಸಂದರ್ಭದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರಿಗೆ ಹೆಚ್ಚಿನ ಅನುಕೂಲವಾಗುವಂತೆ ನೋಡಿಕೊಳ್ಳಬೇಕೆಂದು ದಿನೇಶ್‌ ಗುಂಡೂರಾವ್‌ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ ಶಾಸಕರು ಇರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರಿಗೆ 2:1 ರ ಅನುಪಾತ, ಜೆಡಿಎಸ್‌ ಶಾಸಕರು ಇರುವ ಕ್ಷೇತ್ರಗಳಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಕಾರ್ಯಕರ್ತರಿಗೆ 2:1 ರ ಅನುಪಾತದಲ್ಲಿ ಸದಸ್ಯರನ್ನು ನೇಮಿಸುವುದು. ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿದ್ದರೆ ಕಾಂಗ್ರೆಸ್‌ಗೆ 2 ಜೆಡಿಎಸ್‌ ಗೆ 1 ರ ಅನುಪಾತ. ಜೆಡಿಎಸ್‌ ಎರಡನೇ ಸ್ಥಾನದಲ್ಲಿದ್ದರೆ ಜೆಡಿಎಸ್‌ಗೆ 2 ಕಾಂಗ್ರೆಸ್‌ಗೆ 1 ರ ಅನುಪಾತದಲ್ಲಿ ಸದಸ್ಯರುಗಳನ್ನು ನೇಮಕ ಮಾಡಬೇಕುಎಂದು ವಿವರಿಸಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕು ಮಟ್ಟದ ಸಮಿತಿಗಳ ರಚನೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸದಸ್ಯರಿಗೆ ಹೆಚ್ಚಿನ ಅವಕಾಶ ದೊರೆಯುವಂತೆ ನೋಡಿಕೊಳ್ಳಲು ಸರ್ಕಾರದ ಎಲ್ಲ ಸಚಿವರುಗಳಿಗೆ ನಿರ್ದೇಶನ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರ ಬಹುತೇಕ ನಾಯಕರ ಮನವಿಗೆ ಕ್ಯಾರೆ ಅನ್ನದ ಸಿಎಂ ಕೆಪಿಸಿಸಿ ಅಧ್ಯಕ್ಷರು ಬರೆದ ಪತ್ರಕ್ಕೆ ಬೆಲೆ ಕೊಡ್ತಾರ..?

Advertisements

Leave a Reply

%d bloggers like this: