Advertisements

ರಾಜ್ಯದ ಸಿಎಂ ಕಾಂಗ್ರೆಸ್ ಪಕ್ಷದ ಕ್ಲರ್ಕ್ : ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಚಾಟಿ ಬೀಸಿದ ಮೋದಿ

ನವದಹೆಲಿ : ಮೈತ್ರಿ ಸರ್ಕಾರದಲ್ಲಿ ನನಗೆ ಉಸಿರುಗಟ್ಟಿಸುವಂತ ಪರಿಸ್ಥಿತಿ ಇದೆ. ನಾನು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿಲ್ಲ, ಕೇವಲ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದು ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಬಿಜೆಪಿ ಕೌನ್ಸಿಲ್ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು ಕರ್ನಾಟಕದ ಮುಖ್ಯಮಂತ್ರಿಗಳು ತಾವು ಕ್ಲರ್ಕ್ ರೀತಿ ಕೆಲಸ ಮಾಡುತ್ತಿದ್ದೇನೆ ಅಂತ ಬಹಿರಂಗವಾಗಿ ಹೇಳಿಕೊಳ್ಳುವಂತ ಪರಿಸ್ಥಿತಿಯನ್ನು ಕಾಂಗ್ರೆಸ್ ನಿರ್ಮಾಣ ಮಾಡಿದೆ. ಇಂತಹ ದುಸ್ಥಿತಿಯನ್ನು ತಂದಿರುವಂತ ಕಾಂಗ್ರೆಸ್ ಗೆ ದೇಶದ ಸರ್ಕಾರಿ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದರು.

ತೆಲಂಗಾಣದಲ್ಲಿ ಟಿಡಿಪಿಯೊಂದಿಗೆ ಮಾಡಿಕೊಂಡಿದ್ದ ಕಾಂಗ್ರೆಸ್ ಮೈತ್ರಿ ವಿಫಲವಾಯ್ತು. ಕರ್ನಾಟಕದಲ್ಲಿ ಜೆಡಿಎಸ್ ಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಸಿಎಂ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ನಂತೆ ನಡೆಸಿಕೊಳ್ಳುತ್ತಿದೆ ಎಂದು ನನಗೆ ಅನ್ನಿಸುತ್ತದೆ ಎಂದು ಹೇಳುವ ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಹೇಳಿದರು.

ರಾಜಸ್ಥಾನ ಮತ್ತು ಮಧ್ಯ ಪ್ರದೇಶಗಳಲ್ಲಿ ಪ್ರಾದೇಶಿಕ ಪಕ್ಷಗಳ ಬೆಂಬಲದಿಂದ ಕಾಂಗ್ರೆಸ್ ಸರ್ಕಾರ ರಚಿಸಿದೆ. ಬೆಂಬಲ ಸೂಚಿಸಿರುವ ಇತರೆ ನಾಯಕರು ನಮ್ಮ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ತೆಗೆದುಕೊಂಡು ಅಡಳಿತ ನಡೆಸಿ ಎಂದು ಎಚ್ಚರಿಕೆಯನ್ನು ನೀಡುತ್ತಿವೆ. ಸದ್ಯ ಟ್ರೇಲರ್ ಆರಂಭವಾಗಿದ್ದು, ಮುಂದೆ ಇನ್ನು ಸಿನಿಮಾ ಬಾಕಿ ಇದೆ. ಇಂದು ಒಬ್ಬ ವ್ಯಕ್ತಿಯನ್ನು ಎದುರಿಸಲು ಎಲ್ಲ ಸುಳ್ಳುಗಳು ಒಂದಾಗಿವೆ. ಇವರೆಲ್ಲರೂ ಸೇರಿದ್ರೂ ದೇಶಕ್ಕೆ ಸುಭದ್ರ ಸರ್ಕಾರ ನೀಡಲಾರರು. ದೇಶಕ್ಕೆ ಸುಭದ್ರ ಮತ್ತು ಭದ್ರತೆ ಸರ್ಕಾರ ನೀಡುವ ಉದ್ದೇಶವೇ ಇವರಿಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಕಾಂಗ್ರೆಸ್ ಅವಧಿಯಲ್ಲಿ ನೀಡಲಾದ ಸಾಲದ ಮೊತ್ತದ ಅಂಕಿ-ಅಂಶ ನೀಡಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ಅವಧಿಯಲ್ಲಿ ಎರಡು ಲೋನ್ ಪ್ರಕ್ರಿಯೆಗಳಿದ್ದವು, ಒಂದು ಸಾಮಾನ್ಯ ಪ್ರಕ್ರಿಯೆ ಮತ್ತೊಂದು ಕಾಂಗ್ರೆಸ್ ಪ್ರಕ್ರಿಯೆ. ಸಾಮಾನ್ಯ ಲೋನ್ ಪ್ರಕ್ರಿಯೆಯಡಿಯಲ್ಲಿ ಮನೆ, ಶಿಕ್ಷಣಕ್ಕಾಗಿ ಸಾಲ ಮಾಡಲಾಗುತ್ತಿತ್ತು.

ಆದರೆ ಕಾಂಗ್ರೆಸ್ ಲೋನ್ ಪ್ರಕ್ರಿಯೆಯಡಿಯಲ್ಲಿ ಕಾಂಗ್ರೆಸ್ ಗೆ ಬೇಕಾದವರಿಗೆ ಒಂದು ಫೋನ್ ಕಾಲ್ ನಲ್ಲಿ ಮುಗಿಯುತ್ತಿತ್ತು. ಸಾಮಾನ್ಯ ಲೋನ್ ಪ್ರಕ್ರಿಯೆಯಡಿಯಲ್ಲಿ ಗ್ಯಾರೆಂಟಿ ಕೇಳಲಾಗುತ್ತಿತ್ತು, ಆದರೆ ಕಾಂಗ್ರೆಸ್ ಪ್ರಕ್ರಿಯೆಯಲ್ಲಿ ಏನೂ ಗ್ಯಾರೆಂಟಿ ಕೇಳಲಾಗುತ್ತಿರಲಿಲ್ಲ. ಕೊಟ್ಟ ಹಣವನ್ನು ಕೊಳ್ಳೆಹೊಡೆಯಬಹುದಾಗಿತ್ತು. ಚೌಕಿದಾರ ಯಾವುದೇ ಚೋರರನ್ನೂ ಬಿಡುವುದಿಲ್ಲ ಎಂದು ಮೋದಿ ಎಚ್ಚರಿಸಿದ್ದಾರೆ.

Advertisements

One Comment on “ರಾಜ್ಯದ ಸಿಎಂ ಕಾಂಗ್ರೆಸ್ ಪಕ್ಷದ ಕ್ಲರ್ಕ್ : ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಚಾಟಿ ಬೀಸಿದ ಮೋದಿ

  1. Pingback: ಅಪರೇಷನ್ ಸಂಕ್ರಾಂತಿ : ಕಾಂಗ್ರೆಸ್ ಮನೆಯಲ್ಲಿ ಬೆಂಕಿ : ಕುಮಾರಸ್ವಾಮಿ ಫುಲ್ ಕೂಲ್ – torrentspree

Leave a Reply

%d bloggers like this: