Advertisements

ಆಕೆ ನನ್ನ ಸೋದರಿ ಸಮಾನ :ಘಟನೆ ಆಕಸ್ಮಿಕ :ಟ್ವಿಟರ್ ನಲ್ಲಿ ಸಿದ್ದು ಕ್ಷಮೆಯಾಚನೆ

ಮಹಿಳೆಯ ಕೈಯಿಂದ ಮೈಕ್ ಕಿತ್ತುಕೊಳ್ಳುವ ಭರಾಟೆಯಲ್ಲಿ ದುಪ್ಪಟ್ಟ ತಗುಲಿ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ.

ಮೈಸೂರಿನಲ್ಲಿ ನಡೆದ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ, ಸಿದ್ದರಾಮಯ್ಯ ಎಚ್ಚೆತ್ತುಕೊಂಡಿದ್ದಾರೆ. ರಾಷ್ಟ್ರೀಯ ಸುದ್ದಿಯಾದ ಬೆನ್ನಲ್ಲೇ ಸಿದ್ದರಾಮಯ್ಯ ಆಕೆ ನನ್ನ ಸೋದರಿ ಸಮಾನ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಮುಂದೆ ಟೇಬಲ್ ಕುಟ್ಟಿದ್ರೆ ಹುಷಾರ್ :ಸಿದ್ದು ಬೆವರಿಳಿಸಿದ ತಾ.ಪಂ ಮಾಜಿ ಅಧ್ಯಕ್ಷೆ

ಈ ಘಟನೆಯ ಬಗ್ಗೆ ಟ್ವಿಟ್ಟರಿನಲ್ಲಿ ಸ್ಪಷ್ಟನೆ ನೀಡಿದ ಅವರು, ಇಂದು ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ ದೀರ್ಘ ಭಾಷಣವನ್ನು ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ ಆಕಸ್ಮಿಕವಾದುದು, ಅದರಲ್ಲಿ ದುರುದ್ದೇಶ ಇರಲಿಲ್ಲ. 15 ವರ್ಷಗಳಿಂದ ನಾನು ಬಲ್ಲ ಆ ಕಾರ್ಯಕರ್ತೆ ನನ್ನಸೋದರಿ ಸಮಾನ ಎಂದು ಟ್ವೀಟ್ ಮಾಡಿದ್ದಾರೆ.

Advertisements

Leave a Reply

%d bloggers like this: