Advertisements

ಜಾರ್ಜ್ ಫರ್ನಾಂಡಿಸ್ ಇನ್ನಿಲ್ಲ…ಕಳಚಿತು ರಾಷ್ಟ್ರ ರಾಜಕಾರಣದ ಕೊಂಡಿ

ಮಾಜಿ ರಕ್ಷಣಾ ಸಚಿವ, ತುರ್ತು ಪರಿಸ್ಥಿತಿ ವಿರೋಧಿ ಹೋರಾಟಗಾರ ಜಾರ್ಜ್ ಫರ್ನಾಂಡಿಸ್ ಅವರು ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ದೀರ್ಘ ಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದ ಜಾರ್ಜ್ ಫರ್ನಾಡಿಸ್ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್.ಡಿ.ಎ ಸರ್ಕಾರದಲ್ಲಿ 1998ರಿಂದ 2004ರಿಂದ ರಕ್ಷಣಾ ಸಚಿವರಾಗಿದ್ದರು. 2010ರವರೆಗೆ ಸಕ್ರಿಯ ರಾಜಕಾರಣದಲ್ಲಿದ್ದ ಅವರು 2009-10ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. ನಂತರ ಅನಾರೋಗ್ಯದ ಹಿನ್ನಲೆಯಲ್ಲಿ ರಾಜಕೀಯ ಜೀವನದಿಂದ ಹಿಂದೆ ಸರಿದಿದ್ದರು.

ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್ ಸಮತಾ ಪಕ್ಷದ ಸಂಸ್ಥಾಪಕರು. ತುರ್ತು ಪರಿಸ್ಥಿತಿ ವಿರೋಧಿ ಮತ್ತು ನಾಗರಿಕ ಹಕ್ಕುಗಳ ಹೋರಾಟ, ಸಮಾಜ ಸೇವೆಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ ಜಾರ್ಜ್ ಫರ್ನಾಂಡಿಸ್ ಮೊರಾರ್ಜಿ ದೇಸಾಯಿ ನೇತೃತ್ವದ ಸರ್ಕಾರ 1997ರಿಂದ 1980ರವರೆಗೆ ಅಧಿಕಾರದಲ್ಲಿದ್ದಾಗ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2004ರಲ್ಲಿ ಕಾರ್ಗಿಲ್ ಕಾಫಿನ್ ಗೇಟ್ ಹಗರಣ ವಿಚಾರದಲ್ಲಿ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಆಯೋಗದ ವಿಚಾರಣೆಯಿಂದ ಅವರು ಆರೋಪಮುಕ್ತರಾಗಿ ಹೊರಬಂದರು.

ಅವರ ನಿಧನದಿಂದ ರಾಷ್ಟ್ರ ರಾಜಕಾರಣದಲ್ಲಿ ಹಿರಿಯ ಕೊಂಡಿಯೊಂದು ಕಳಚಿಕೊಂಡಿದೆ

Advertisements

One Comment on “ಜಾರ್ಜ್ ಫರ್ನಾಂಡಿಸ್ ಇನ್ನಿಲ್ಲ…ಕಳಚಿತು ರಾಷ್ಟ್ರ ರಾಜಕಾರಣದ ಕೊಂಡಿ

  1. Pingback: ದೇವೇಗೌಡರ ಆರೋಗ್ಯ ವಿಚಾರಿಸಿದ ಪ್ರಥಮ್ :ಒಳ್ಳೆ ಹುಡುಗನ ಕಂಡು ಮಾಜಿ ಪಿಎಂ ಹೇಳಿದ್ದೇನು..? – torrentspree

Leave a Reply

%d bloggers like this: