ಸತ್ತವನೇ ಕೊಲೆಗಾರ : RSS ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ : ಚಡ್ಡಿ ಬಿಚ್ಚಿಟ್ಟ ಸಾವಿನ ರಹಸ್ಯ

ಕೇವಲ ಒಂದು ಚಡ್ಡಿಯ ಮೂಲಕ ರಾಜ್ಯವನ್ನೇ ಅಲ್ಲಾಡಿಸಿದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಮಧ್ಯ ಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ವಾರ ಸಂಭವಿಸಿದ್ದ ಆರ್. ಎಸ್. ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಬಹುದೊಡ್ಡ ಟ್ವಿಸ್ಟ್ ದೊರಕಿದ್ದು, ಕೊಲೆಯಾದವನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದವಾರ ಮಧ್ಯ ಪ್ರದೇಶದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಆರ್. ಎಸ್.ಎಸ್ ಕಾರ್ಯಕರ್ತ ಹಿಮ್ಮತ್ ಪಾಟೀದಾರ್ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸ್ ತನಿಖೆ ಬಳಿಕ ಕೊಲೆಯಾಗಿದ್ದಾನೆ ಎಂದು ತಿಳಿದಿದ್ದ ಮಧ್ಯಪ್ರದೇಶದ ರತ್ಲಮ್ ಜಿಲ್ಲೆಯ 36 ವರ್ಷದ ಹಿಮ್ಮತ್ ಪಾಟಿದಾರ್ ಜೀವಂತವಾಗಿರುವ ವಿಷಯ ಬೆಳಕಿಗೆ ಬಂದಿದೆ. ವಾಸ್ತವವಾಗಿ ಕೊಲೆಯಾಗಿದ್ದೇ ಬೇರೆ. ಇನ್ಷೂರೆನ್ಸ್ ಹಣಕ್ಕಾಗಿ ಹಿಮ್ಮತ್ ಪಾಟೀದಾರ್ ಸೃಷ್ಟಿಸಿದ ಮಹಾ ನಾಟಕ ಅದಾಗಿತ್ತು.

ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮದನ್ ಮಾಳವೀಯ(32 ವರ್ಷ) ಎಂಬಾತನನ್ನು ಹತ್ಯೆ ಮಾಡಿ, ಆ ಶವ ತನ್ನದೆಂದು ಹಿಮ್ಮತ್ ಪಾಟಿದಾರ್ ಬಿಂಬಿಸಿದ್ದನೆಂದು ಪೊಲೀಸರು ಹೇಳಿದ್ದಾರೆ. ತನಿಖೆ ವೇಳೆ ಶವದ ಡಿಎನ್ಎ ಪರೀಕ್ಷೆ ನಡೆಸಿದ್ದ ಪೊಲೀಸರಿಗೆ ಈ ಮಾಹಿತಿ ದೊರೆತಿದ್ದು, ಪ್ರಸ್ತುತ ಪರಾರಿಯಾಗಿರುವ ಹಿಮ್ಮತ್ ಪಾಟೀದಾರ್ ನನ್ನು ಪೊಲೀಸರು ಸದ್ಯ ಹುಡುಕುತ್ತಿದ್ದಾರೆ.

ಜನವರಿ 23ರಂದು ರತ್ಲಮ್ ಜಿಲ್ಲೆಯ ಕಾಮೆದ್ ಎಂಬ ಗ್ರಾಮದ ಹೊಲದಲ್ಲಿ ಶವವೊಂದು ಪತ್ತೆಯಾಗಿತ್ತು. ಓರ್ವ ವ್ಯಕ್ತಿಯನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿತ್ತು.ಅಲ್ಲದೆ ಮುಖವನ್ನು ಗುರುತು ಸಿಗದಂತೆ ಸುಟ್ಟುಹಾಕಲಾಗಿತ್ತು. ಆದರೆ, ದೇಹದ ಆಕಾರ, ಬಟ್ಟೆ ಎಲ್ಲವೂ ಹಿಮ್ಮತ್ ಪಾಟೀದಾರ್ ಗೆ ಹೋಲಿಕೆಯಾಗುತ್ತಿತ್ತು. ಹಿಮ್ಮತ್ ಪಾಟೀದಾರ್ ಅವರ ತಂದೆಯು ತಮ್ಮ ಮಗ ಕೊಲೆಯಾಗಿದ್ಧಾನೆಂದು ಪೊಲೀಸರಿಗೆ ದೂರು ಕೊಡುತ್ತಾರೆ.

ಅಲ್ಲಿಗೆ, ಆರೆಸ್ಸೆಸ್ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ ಎಂದು ಈ ಪ್ರಕರಣವು ರಾಜಕೀಯ ಬಣ್ಣ ಪಡೆಯುತ್ತದೆ. ವಿಪಕ್ಷದಲ್ಲಿರುವ ಬಿಜೆಪಿಗೆ ಸರ್ಕಾರದ ಮೇಲೆ ಹರಿಹಾಯಲು ಹೊಸ ಅಸ್ತ್ರ ಸಿಗುತ್ತದೆ. ಬಿಜೆಪಿ ನಾಯಕರು ಹೇಳಿಕೆ ಮೇಲೆ ಹೇಳಿಕೆ ಕೊಟ್ಟು ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ಕೂಡ ನಡೆಸಿದ್ದರು.
ಆದರೆ, ಕೆಲವೇ ದಿನಗಳಲ್ಲಿ ಪೊಲೀಸರಿಗೆ ಈ ಪ್ರಕರಣದಲ್ಲಿ ಸಂಶಯಗಳು ಕಾಣತೊಡಗುತ್ತವೆ. ಶವದ ಸಮೀಪದಲ್ಲಿ ದೊರೆತಿದ್ದ ಡೈರಿಯೊಂದು ಹಲವು ಸುಳಿವನ್ನು ಬಿಟ್ಟುಕೊಡುತ್ತದೆ.

ಆ ಡೈರಿಯಲ್ಲಿ ಪಾಟೀದಾರ್ ನ ಇನ್ಷೂರೆನ್ಸ್ ಪಾಲಿಸಿ ನಂಬರ್, ಬ್ಯಾಂಕ್ ನ ಫಿಕ್ಸೆಡ್ ಡೆಪಾಸಿಟ್, ಪಿನ್ ನಂಬರ್ ಇತ್ಯಾದಿ ವಿವರಗಳಿರುತ್ತವೆ. ಅಷ್ಟೇ ಅಲ್ಲದೆ, ಶವದಲ್ಲಿದ್ದ ಮೊಬೈಲ್ ಫೋನ್ ನಲ್ಲಿ ದೂರವಾಣಿ ಕರೆಯ ವಿವರವನ್ನೆಲ್ಲಾ ಅಳಿಸಿಹಾಕಲಾಗಿರುತ್ತದೆ. ಇದು ಪೊಲೀಸರಲ್ಲಿ ಸಂಶಯದ ಬೀಜ ಬಿತ್ತುವಂತೆ ಮಾಡಿತ್ತು.
ಹೀಗಾಗಿ ಡಿಎನ್ಎ ಪರೀಕ್ಷೆಗೆ ಪೊಲೀಸರೂ ಮುಂದಾದರು. ಡಿಎನ್ಎ ವರದಿ ಬಂದರೆ, ಹಿಮ್ಮತ್ ಪಾಟೀದಾರ್ನ ಡಿಎನ್ಎ ಮತ್ತು ತಂದೆಯ ಡಿಎನ್ಎ ಹೊಂದಿಕೆಯಾಗುತ್ತಿರಲಿಲ್ಲ.

ಹೀಗಾಗಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದಾಗ, ಪೊಲೀಸರಿಗೆ ಮತ್ತೊಂದು ಮಾಹಿತಿ ಸಿಕ್ತು.
ಈ ಹತ್ಯೆ ನಡೆಯುವ ಒಂದು ದಿನ ಮೊದಲು ಪಾಟೀದಾರ್ ನ ತೋಟದಲ್ಲಿ ಕೆಲಸ ಮಾಡುವ ಕೂಲಿ ಮದನ್ ಮಾಳವೀಯ ಎಂಬಾತ ನಾಪತ್ತೆಯಾಗಿರುವುದು ಗೊತ್ತಾಯ್ತು.

ಹೀಗಾಗಿ ಈ ಕೂಲಿಕಾರನ ಸಂಬಂಧಿಕರ ಡಿಎನ್ಎ ಜೊತೆ ತಾಳೆ ಮಾಡಿದಾಗ ಎರಡೂ ಡಿಎನ್ಎ ಹೊಂದಿಕೆಯಾಗಿತ್ತು. ಹಾಗಂತ ಅಲ್ಲಿಗೆ ಹಿಮ್ಮತ್ ಕೊಲೆ ಪ್ರಕರಣಕ್ಕೆ ಸೂಕ್ತ ಸಾಕ್ಷಿಗಳು ಸಿಕ್ಕಿರಲಿಲ್ಲ. ಮದನ್ ಹೆಂಡತಿ ಕೂಡ ಶವದ ಗುರುತು ಹಿಡಿದು ಅದು ತನ್ನ ಗಂಡನದೇ ಎಂದು ಪತ್ತೆ ಹಚ್ಚಿದರೂ, ಪೊಲೀಸರು ಮತ್ತಷ್ಟು ಸಾಕ್ಷಿ ಕಲೆ ಹಾಕಲು ಮುಂದಾದರು.

ಪೊಲೀಸರಿಗೆ ಸುಳಿವು ಕೊಟ್ಟ ಚಡ್ಡಿ!

ಹಿಮ್ಮತ್ ಪಾಟಿದಾರ್ ಆ ಶವ ತನ್ನದೇ ಎಂದು ಬಿಂಬಿಸಲು ಶವದ ಮೇಲಿನ ಬಟ್ಟೆಗಳನ್ನು ತೆಗೆದು ತನ್ನ ಬಟ್ಟೆಗಳೊಂದಿಗೆ ಬದಲಿಸಿದ್ದ. ಆದರೆ, ಶವದ ಬಟ್ಟೆಯನ್ನ ಬದಲಿಸಿದ್ದ ಹಿಮ್ಮತ್, ಚಡ್ಡಿಯನ್ನ ಮಾತ್ರ ಹಾಗೆಯೇ ಬಿಟ್ಟಿದ್ದ. ಹೀಗಾಗಿ ಇದು ಹಿಮ್ಮತ್ ಶವವಲ್ಲ, ಇದು ಮದನ್ ಮಾಳವೀಯ ಶವ ಎಂಬ ತೀರ್ಮಾನಕ್ಕೆ ಪೊಲೀಸರು ಬಂದರು.
ಹಾಗಾದರೆ ಹಿಮ್ಮತ್ ಅದ್ಯಾಕೆ ಈ ನಾಟಕವಾಡಿದ ಅಂದರೆ ಸಿಕ್ಕಿದ್ದು ಮತ್ತೊಂದು ಕುತೂಹಲಕಾರಿ ಅಂಶ.

ಇನ್ಸೂರೆನ್ಸ್ ಗಾಗಿ ನಡೆದ ಕೊಲೆ

ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದ ಹಿಮ್ಮತ್ ಪಾಟೀದಾರ್, ಈ ಸಮಸ್ಯೆಯಿಂದ ಹೊರಬರಲು ಮಹಾ ಷಡ್ಯಂತ್ರ ರಚಿಸುತ್ತಾನೆ. 20 ಲಕ್ಷ ಮೊತ್ತದ ಇನ್ಷೂರೆನ್ಸ್ ಪಡೆಯಲು ತನ್ನ ಸಾವಿನ ನಾಟಕ ಆಡಿದ್ದಾನೆಂಬುದು ಪೊಲೀಸರ ಶಂಕೆ.

ಅದಕ್ಕಾಗಿ ತನ್ನ ತೋಟದಲ್ಲಿ ಕೆಲಸ ಮಾಡುವ ಮದನ್ ನನ್ನು ಹತ್ಯೆ ಮಾಡಿ, ಅದು ತನ್ನದೇ ಶವ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಾನೆ. ತನ್ನ ಕೆಲ ವಸ್ತುಗಳನ್ನ ಶವದ ಬಳಿ ಬೇಕಂತಲೇ ಬಿಟ್ಟು ಹೋಗಿದ್ದ ಎಂದು ಪೊಲೀಸರು ತೀರ್ಮಾನಕ್ಕೆ ಬಂದಿದ್ದಾರೆ.

ಇದೀಗ ಹಿಮ್ಮತ್ ತಲೆ ಮರೆಸಿಕೊಂಡಿದ್ದು,ಆತನ ಬಂಧನದ ನಂತರವೇ ಮತ್ತಷ್ಟು ಸತ್ಯಾಂಶ ಹೊರ ಬರಬೇಕಾಗಿದೆ.

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: