Advertisements

ಯಕ್ಷಗಾನದಲ್ಲಿ ಮೋದಿ ಹೆಸರು ಬಂದ್ರೆ ಹುಷಾರ್ – ಕೈ ಪಡೆಯಿದ ಪೊಲೀಸರಿಗೆ ಫೋನ್

ಯಕ್ಷಗಾನದ ಸಂಭಾಷಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹೆಸರು ಉಲ್ಲೇಖಿಸಿ ಸಂಭಾಷಣೆ ನಡೆಸಿದ್ದು ವಿವಾದಕ್ಕೆ ಕಾರಣವಾಗಿದೆ.ಛತ್ರಪತಿ ಶಿವಾಜಿ ಮಹಾರಾಜನ ಕಥೆಯುಳ್ಳ ಪ್ರಸಂಗದ ಯಕ್ಷಗಾನ ನಡೀತಿದ್ದಾಗ ಶಿವಾಜಿಯ ಗುರು ಸಮರ್ಥ ರಾಮದಾಸನ ಪಾತ್ರ ಮಾಡಿದ್ದ ಕಲಾವಿದ ಗಣರಾಜ ಭಟ್ ಬಡೆಕ್ಕಿಲ.

ಭಾರತದ ಸ್ವಚ್ಛತೆಗಾಗಿ ನರೇಂದ್ರನಂತೆ ನೀನು ಕೇಸರಿಯ ತಂಡ ಕಟ್ಟಬೇಕು. ರಾತ್ರಿ ವೇಳೆ ಗೋವುಗಳನ್ನು ಕದ್ದೊಯ್ಯುವ ದುಷ್ಟರನ್ನು ಸದೆಬಡಿಯಲು ಜಾಗರಣ ನಿಲ್ಲುವಂತೆ ತರುಣ ಪಡೆಯನ್ನು ಜಾಗರಣ ವೇದಿಕೆಯ ರೂಪದಲ್ಲಿ ಕಟ್ಟಬೇಕಿದೆ ಅನ್ನುವ ಉಪದೇಶವನ್ನು ಶಿವಾಜಿಗೆ ಹೇಳುತ್ತಾರೆ.

ಕಥೆಯ ರೂಪವನ್ನು ಈಗಿನ ರಾಜಕೀಯ ಸನ್ನಿವೇಶಕ್ಕೆ ತಕ್ಕಂತೆ ಬದಲಿಸಿಕೊಂಡು ಪ್ರಧಾನಿ ಮತ್ತು ಹಿಂದು ಸಂಘಟನೆಯ ಹೆಸರು ಹೇಳಿದ್ದು ಬಿಜೆಪಿ ವಿರೋಧಿಗಳ ಕಣ್ಣು ಕೆಂಪಾಗಿಸಿದ್ದು ಕಾಂಗ್ರೆಸಿಗರಿಂದ ಆಕ್ಷೇಪ ಕೇಳಿಬಂದಿದೆ.

ಹೀಗಾಗಿ ಈ ವಿಡಿಯೋ ವೈರಲ್ ಆಗಿದ್ದು ಜಾಲತಾಣದಲ್ಲಿ ಪರ – ವಿರೋಧ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಮಾಜಿ ಸಚಿವ ರಮಾನಾಥ ರೈ ದಕ್ಷಿಣ ಕನ್ನಡ ಎಸ್ಪಿಗೆ ಫೋನ್ ಮಾಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಆದರೆ, ಲಿಖಿತವಾಗಿ ಯಾವುದೇ ದೂರು ಸಲ್ಲಿಸಿಲ್ಲ. ಇದನ್ನೇ ನೆಪ ಮಾಡಿಕೊಂಡ ಪುತ್ತೂರು ಠಾಣೆ ಪೊಲೀಸರು ಕಲಾವಿದ ಗಣರಾಜ ಭಟ್ಟರನ್ನು ಠಾಣೆಗೆ ಕರೆಸಿ, ಮುಚ್ಚಳಿಕೆ ಬರೆಸಿದ್ದಾರೆ.

ಈ ಯಕ್ಷಗಾನ ಕೆಲವು ದಿನಗಳ ಹಿಂದೆ ಪುತ್ತೂರು ತಾಲೂಕಿನ ದೇಂತಡ್ಕದಲ್ಲಿ ನಡೆದಿತ್ತು. ಇದೀಗ ರಮಾನಾಥ ರೈಯ ಫೋನ್ ಕರೆಯ ಮಾತ್ರಕ್ಕೆ ಪೊಲೀಸರು ಕಲಾವಿದನನ್ನು ಠಾಣೆಗೆ ಕರೆಸಿ, ವಿಚಾರಣೆ ನಡೆಸಿದ್ದು ಹಿಂದು ಸಂಘಟನೆ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ನಿಜಕ್ಕೂ ಇದನ್ನು ದುರಂತ ಅನ್ನದೆ ವಿಧಿಯಿಲ್ಲ. ಭಗವಾನ್ ರಂತಹ ಬುದ್ದಿ ಜೀವಿಗಳು ಧರ್ಮವನ್ನು ಲೇವಡಿ ಮಾಡುತ್ತಿದ್ದಾರೆ. ಆಸ್ತಿಕರ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ. ಆದರೆ ಅದನ್ನು ನಿಯಂತ್ರಿಸಬೇಕಾದ ನಾಯಕರು ಮೌನವಾಗಿದ್ದಾರೆ. ಮೋದಿ ಹೆಸರು ಕೇಳಿ ಬಂದರೆ ಸಾಕು ಉರಿದು ಬೀಳುತ್ತಾರೆ.

ಹಾಗಂತ ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಶೀಘ್ರದಲ್ಲೇ ಲೋಕಸಭೆ ಚುನಾವಣೆ ಹತ್ತಿರದಲ್ಲಿದೆ. ತಪ್ಪು ಮಾಡಿದವರಿಗೆ ಮತದಾರರೇ ಪಾಠ ಕಲಿಸುತ್ತಾರೆ.

ಕಳೆದ ವಿಧಾನಸಭೆಯಲ್ಲೂ ಹೀಗೆ ಆಗಿತ್ತು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಬಸವಣ್ಣನ ವಚನವನ್ನು ಉಲ್ಲೇಖಿಸುತ್ತಾ ನೀಡಿದ್ದ ‘ಇವನರ್ವ’ ಹೇಳಿಕೆಯನ್ನು ಯಕ್ಷಗಾನದಲ್ಲಿ ಬಳಕೆ ಮಾಡಿದ ಆರೋಪದಲ್ಲಿ ಯಕ್ಷಗಾನ ಕಲಾವಿದರೊಬ್ಬರಿಗೆ ನೀತಿ ಸಂಹಿತೆ ಉಲ್ಲಂಘನೆಯ ಆರೋಪದಡಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಚುನಾವಣಾ ಅಧಿಕಾರಿ ನೋಟಿಸ್ ಜಾರಿಗೊಳಿಸಿದ್ದರು.

ಆ ದೃಶ್ಯಾವಳಿಯ ಬಗ್ಗೆ ತನಿಖೆ ನಡೆಸದೆ ನೋಟಿಸ್ ಕೊಟ್ಟ ಕಾರಣ ಆಯೋಗ ಮುಜುಗರಕ್ಕೂ ಒಳಗಾಗಿತ್ತು.

ಕಟೀಲು ಮೇಳದ ಪೂರ್ಣೇಶ್ ಎಂಬ ಕಲಾವಿದರಿಗೆ ನೋಟೀಸ್ ಕೊಟ್ಟಿದ್ದ ಆಯೋಗ, ಎಂಬ  ಎಪ್ರಿಲ್ 1ರಂದು ಮೂಡುಬಿದಿರೆಯ ಪಡುಮಾರ್ನಾಡಿನ ಬನ್ನಡ್ಕ ಎಂಬಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮದಲ್ಲಿ ರಾಜಕೀಯ ಪ್ರೇರಿತ ಶಬ್ದ ಬಳಸಿದ್ದಾರೆ. ಆದ್ದರಿಂದ ಅವರನ್ನು ಮೇಳದಿಂದ ವಜಾಗೊಳಿಸುವಂತೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಕಟೀಲು ಮೇಳಕ್ಕೂ ಸೂಚಿಸಿದ್ದರು.

ಆದರೆ ‘ಇವನರ್ವ’ ಪದದ ಸಂಭಾಷಣೆಯನ್ನು ಬಳಸಿದ್ದು ಮಾರ್ಚ್ 24 ರಂದು ಕೇರಳದ ಮಾನ್ಯ ಎಂಬಲ್ಲಿ ನಡೆದ ಯಕ್ಷಗಾನದಲ್ಲಿ. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಾಗುವುದಕ್ಕಿಂತ ಮುಂಚೆ ಘಟನೆ ನಡೆದಿದೆ.

ಜೊತೆಗೆ ಅದು ಕೇರಳದಲ್ಲಿ ನಡೆದಿರುವ ಕಾರಣ, ಕರ್ನಾಟಕದ ಚುನಾವಣೆಗೆ ಸಂಬಂಧವೇ ಇಲ್ಲ ಎಂದು ಪ್ರತಿಕ್ರಿಯಿಸಿದ್ದರು.

Advertisements

Leave a Reply

%d bloggers like this: