Advertisements

ಬೆಂಗಳೂರಿನಲ್ಲಿ ಬೈಕ್ ಏರಿದ ಮುಖ್ಯಮಂತ್ರಿ ಕುಮಾರಸ್ವಾಮಿ

ರಾಜ್ಯ ಸರ್ಕಾರ ವಿನೂತನ ಯೋಜನೆಯಾದ “ಜನ ಸೇವಕ – ನಾಗರಿಕರ ಮನೆಬಾಗಿಲಿಗೆ ಸರ್ಕಾರದ ಸೇವೆಗಳು” ಯೋಜನೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರಿನ ಬಾಗಲಗುಂಟೆಯಲ್ಲಿ ಮನೆ ಮನೆ ತೆರಳಿ ಚಾಲನೆ ನೀಡಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಯೋಜನೆಯನ್ನು ಮುಖ್ಯಮಂತ್ರಿಗಳು ಸ್ಥಳೀಯರೊಬ್ಬರ ಮೋಟಾರ್ ಸೈಕಲ್ ಮೇಲೆ ಕುಳಿತು ಹಲವಾರು ಮನೆಗಳಿಗೆ ತೆರಳಿ ಯೋಜನೆಯ ಲಾಭ ಪಡೆಯುವಂತೆ ಕೋರಿದರು.

ಈ ಸಂದರ್ಭದಲ್ಲಿ ನಾಗರಿಕರೊಂದಿಗೆ ಮಾತನಾಡಿದ ಅವರು, “ಈ ಯೋಜನೆಯಡಿ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬಿ.ಬಿ.ಎಂ.ಪಿ ಖಾತಾ ಸೇವೆಗಳು, ಹಿರಿಯ ನಾಗರಿಕರ ಕಾರ್ಡ್ ಮತ್ತು ಆರೋಗ್ಯ ಕಾರ್ಡ್ ಮುಂತಾದ ಸೇವೆಗಳನ್ನು ಪಡೆಯಬಹುದಾಗಿದ್ದು, ಸಹಾಯವಾಣಿ ಸಂಖ್ಯೆ: 080-44554455 ದೂರವಾಣೆ ಕರೆ ಮಾಡಿದರೆ ಸಾಕು ನಾಗರಿಕರು ಕೋರಿದ ಸೇವೆಗಳನ್ನು ಸಮಯ ಬದ್ಧವಾಗಿ ಹಾಗೂ ಗುಣಾತ್ಮಕವಾಗಿ ವಿಲೇವಾರಿ ಮಾಡಲಾಗುವುದು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಬಿಬಿಎಂಪಿ ಅನುದಾನದಡಿಯಲ್ಲಿ ಫಲಾನುಭಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕ ಆರ್ ಮಂಜುನಾಥ್, ಬಿಬಿಎಂಪಿ ಮಹಾಪೌರ ಶ್ರೀಮತಿ ಗಂಗಾಬಿಕೆ ಮಲ್ಲಿಕಾರ್ಜುನ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

Advertisements

Leave a Reply

%d bloggers like this: