ಆಂಧ್ರ ಸಿಎಂ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ : ಜಗನ್ ಕೊಟ್ಟ ಟಿಪ್ಸ್ ಏನು ಗೊತ್ತಾ…?

ಆಂಧ್ರದ ನೂತನ ಸಿಎಂ ಜಗನ್ ಅವರನ್ನು ಕರ್ನಾಟಕ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ ಸ್ವಾಮಿ ಇಂದು ಭೇಟಿ ಮಾಡಿದ್ದಾರೆ.

ಈ ಸಂಬಂಧ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಜಗನ್ ಹೇಳಿದ ಮಾತುಗಳನ್ನು ಕೂಡಾ ಅಕ್ಷರ ರೂಪಕ್ಕೆ ಇಳಿಸಿದ್ದಾರೆ.

“ ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್ ಮೋಹನ್ ರೆಡ್ದಿ ಅವರನ್ನು ವಿಜಯವಾಡಾದಲ್ಲಿ ಭೇಟಿಯಾಗಿ, ಅಭಿನಂದನೆಗಳನ್ನು ಸಲ್ಲಿಸಿ ಶುಭಾಶಯ ಕೋರಿದೆ.

ಅಂಧ್ರದಲ್ಲಿ ’ಜಗನ್ ಅಣ್ಣಾ’ ಎಂದೇ ಜನಪ್ರಿಯರಾಗಿರುವ ಜಗನ್ ಮೋಹನ್ ರೆಡ್ಡಿಯವರ ರಾಜಕೀಯ ಜೀವನ, ರಾಜಕೀಯ ಕ್ಷೇತ್ರದಲ್ಲಿರುವ ಎಲ್ಲ ಯುವಕರಿಗೆ, ಕಾರ್ಯಕರ್ತರಿಗೆ ಪ್ರೇರಣೆ ನೀಡುವಂಥದ್ದು. ಹತ್ತು ವರ್ಷಗಳಿಗೂ ಹೆಚ್ಚು ಸುಧೀರ್ಘ ಕಾಲದ ಅವರ ಹೋರಾಟದ ದಾರಿ ಎಲ್ಲ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಜನರ ಸೇವೆಗಾಗಿ ಅವರ ಬದ್ದತೆ ಮತ್ತು ಎದುರಾದ ಎಲ್ಲ ಅಡೆತಡೆ, ಸೋಲು, ಸವಾಲುಗಳನ್ನು ಮೀರಿ, ಗುರಿಮುಟ್ಟುವವರೆಗೂ ವಿರಮಿಸದ ಅವರ ಛಲ, ದಿಟ್ಟತನ, ಹೋರಾಟಗಳಿಗೆ ಜನ ಆಶೀರ್ವಾದ ಮಾಡಿದ್ದಾರೆ.

ಈ ಅವಕಾಶವನ್ನು ಅವರು ಸಂಪೂರ್ಣವಾಗಿ ಬಳಸಿಕೊಂಡು, ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾಗಿ ಅವರು, ಜನರ ನಿರೀಕ್ಷೆಗೆ ತಕ್ಕಂತೆ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ.

ಕರ್ನಾಟಕದ ರಾಜಕಾರಣವನ್ನು ಕೂಡ ಚೆನ್ನಾಗಿ ತಿಳಿದಿರುವ ಜಗನ್ ರವರು ಪ್ರಸಕ್ತ ರಾಜಕೀಯ ಸನ್ನಿವೇಶಗಳನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿದರು. ಇಂತಹ ಸಂದರ್ಭದಲ್ಲಿ ನನ್ನಂತಹ ಯುವ ರಾಜಕಾರಣಿಗಳಿಗೆ ಉತ್ತಮ ಅವಕಾಶಗಳಿವೆ, ಸಾರ್ವಜನಿಕ ಜೀವನದಲ್ಲಿ, ಯಾವುದಕ್ಕೂ ಹಿಂಜರಿಯದೆ ಜನಸೇವೆಯೊಂದನ್ನೇ ಗುರಿಯಾಗಿಟ್ಟುಕೊಂಡು ಮುಂದುವರಿಯುವಂತೆ ನನಗೆ ಸಲಹೆ ನೀಡಿ, ರಾಜಕೀಯದಲ್ಲಿ ಉತ್ತಮ ಭವಿಷ್ಯವನ್ನು ಹಾಗು ಯಶಸ್ಸನ್ನು ಹಾರೈಸಿದರು.

ಹಾಗಂತ ಇದೊಂದು ಶುಭಾಶಯ ಕೋರುವ ಭೇಟಿ ಅನ್ನುವ ಹಾಗಿಲ್ಲ. ಒಳಗಡೆ ರಹಸ್ಯವೊಂದು ಅಡಗಿದೆ ಅನ್ನುವುದು ಸ್ಪಷ್ಟ. ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ಚಂದ್ರಬಾಬು ನಾಯ್ಡು ಆತ್ಮೀಯ ಸ್ನೇಹಿತರು.

ಅದೇ ನಾಯ್ಡುವನ್ನು ಸೋಲಿಸಿ ಪಟ್ಟಕ್ಕೆ ಏರಿದವರು ಜಗನ್, ಕೆಲವು ಹೆಸರುಗಳು ಅವಕ್ಕಿರುವ ಲಿಂಕ್ ಗಳನ್ನು ನೋಡಿದರೆ ಮುಂದೊಂದು ದಿನ ರಾಜಕೀಯದ ತಿರುವು ಗೋಚರಿಸಿದರೂ ಅಚ್ಚರಿಯಿಲ್ಲ.

//ws-in.amazon-adsystem.com/widgets/q?rt=tf_ssw&ServiceVersion=20070822&MarketPlace=IN&ID=V20070822%2FIN%2Ftorrentspree-21%2F8003%2Fe4eeca1a-bc93-4ca0-8db3-9db13a7b07ce&Operation=GetScriptTemplate Amazon.in Widgets

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: