ನಾನ್ಯಾಕೆ ಸಾಮಾನ್ಯರ ಕರೆಯನ್ನು ಸ್ವೀಕರಿಸುವುದಿಲ್ಲ…ಸುಮಲತಾ ಹೇಳಿದ್ದೇನು..?

ಸುಮಲತಾ ಅಂಬರೀಶ್ ಸಂಸತ್ ಸದಸ್ಯೆಯಾಗಿ ಆಯ್ಕೆಯಾದ ನಂತ್ರ ಬದಲಾಗಿದ್ದಾರೆ, ಸಾಮಾನ್ಯರ ಕರೆಯನ್ನು ಸ್ವೀಕರಿಸುವುದಿಲ್ಲ ಅನ್ನುವ ಆರೋಪ ಬರ ತೊಡಗಿದೆ. ಈ ಕುರಿತಂತೆ ಮಾತನಾಡಿರುವ ಅವರು ಸಭೆಗಳು ಅಥವಾ ದೆಹಲಿಯಲ್ಲಿ ಇದ್ದಾಗ ಕರೆ ಸ್ವೀಕರಿಸಲು ಆಗೋದಿಲ್ಲ.

ಈ ಸಮಸ್ಯೆಯನ್ನು ಬಗೆ ಹರಿಸುವ ಸಲುವಾಗಿ ಮುಂದೆ ಮಂಡ್ಯದಲ್ಲಿ ಕಚೇರಿ ಮಾಡಿ ಜನರ ಸಮಸ್ಯೆ ಆಲಿಸಲು ಸಿಬ್ಬಂದಿ ನೇಮಕ ಮಾಡುತ್ತೇನೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.

ಮಂಡ್ಯ ಕೀಲಾರ ಗ್ರಾಮದಲ್ಲಿ ನಡೆದ ‘ಸ್ವಚ್ಚ ಮೇವ ಜಯತೆ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದರು.

ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಇದು ರಾಜಕಾರಣ ಮಾಡುವ ಸಮಯವಲ್ಲ. ಮಂಡ್ಯದಲ್ಲಿ ಈಗಾಗಲೇ ನನ್ನ ಮನೆ ಇದೆ. ಪ್ರತಿ ತಾಲೂಕಿಗೂ ಭೇಟಿ ಕೊಡುತ್ತೇನೆ. ವಾರಕ್ಕೆ ಮೂರು ದಿನ ಮಂಡ್ಯದಲ್ಲೇ ವಾಸ್ತವ್ಯ ಹೂಡುತ್ತೇನೆ ಎಂದು ಭರವಸೆ ನೀಡಿದರು.

ಚುನಾವಣೆ ವೇಳೆ ಯಾರ ಬಗ್ಗೆಯು ಕೀಳಾಗಿ ಮಾತನಾಡಿಲ್ಲ. ಈಗ್ಲೂ ಮಾತನಾಡಲ್ಲ. ಜನ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಕೆಲಸ ಮಾಡಿಕೊಂಡು ಹೋಗುತ್ತೇನೆ. ಟೀಕೆಗಳಿಗೆ ಉತ್ತರ ಕೊಡುತ್ತಾ ಸಮಯ ಹರಣ ಮಾಡಲ್ಲ.ನನ್ನಿಂದ ಯಾವುದೇ ವಿವಾದಾತ್ಮಕ ಹೇಳಿಕೆ ನಿಮಗೆ ಸಿಗುವುದಿಲ್ಲ ಎಂದು ಹೇಳಿದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: