ತಾನು ರಾಜ್ಯಪಾಲರಾಗಿ ನೇಮಕವಾಗಿಲ್ಲ : ಸ್ಪಷ್ಟನೆ ಕೊಟ್ಟ ಸುಷ್ಮಾ ಸ್ವರಾಜ್

ಆಂಧ್ರ ಪ್ರದೇಶದ ರಾಜ್ಯಪಾಲರನ್ನಾಗಿ ತಮ್ಮನ್ನು ನೇಮಕ ಮಾಡಿರುವ ಕುರಿತ ಸುದ್ದಿಗಳು ಶುದ್ದ ಸುಳ್ಳು. ಇದೆಲ್ಲ ಊಹಾಪೋಹ. ರಾಜ್ಯಪಾಲ ಹುದ್ದೆಗೆ ತಮ್ಮನ್ನು ನೇಮಕ ಮಾಡಿಲ್ಲ ಎಂದು ಸುಷ್ಮಾ ಸ್ವರಾಜ್‌ ಸ್ಪಷ್ಟಪಡಿಸಿದ್ದಾರೆ.

ಸುಷ್ಮಾ ಸ್ವರಾಜ್‌ ಅವರು ಆಂಧ್ರ ಪ್ರದೇಶದ ರಾಜ್ಯಪಾಲರಾಗಿದ್ದಾರೆ ಸುದ್ದಿ ವೈರಲ್ ಆಗಲು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಡಾ. ಹರ್ಷ ವರ್ಧನ್ ಅವರು ಕಾರಣ ಎನ್ನಲಾಗುತ್ತಿದೆ. ಹರ್ಷ ವರ್ಧನ್ ಅವರು, ‘ನನ್ನ ಸೋದರಿ, ವಿದೇಶಾಂಗ ಇಲಾಖೆಯ ಮಾಜಿ ಸಚಿವೆ ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಅವರಿಗೆ ಅಭಿನಂದನೆಗಳು. ಸುಷ್ಮಾ ಸ್ವರಾಜ್‌ ಅವರ ಅನುಭವದ ಫಲವನ್ನು ಆ ರಾಜ್ಯದ ಜನ ಪಡೆಯಲಿದ್ದಾರೆ,’ ಎಂದು ಟ್ವೀಟ್ ಮಾಡಿದ್ದರು.

ಸಂಪುಟದಲ್ಲಿ ಸಚಿವ ಸ್ಥಾನ ಕೊಡದ ಮೋದಿ ಸುಷ್ಮಾ ಅವರಿಗೆ ಕೊಟ್ರ ಬಂಪರ್ ಗಿಫ್ಟ್

ಟ್ವೀಟ್ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸುಷ್ಮಾ ಅವರಿಗೆ ವ್ಯಾಪಕ ಅಭಿನಂದನೆಗಳನ್ನು ಸಲ್ಲಿಸಲಾಗಿತ್ತು. ಇನ್ನು ಸುಷ್ಮಾ ಸ್ವರಾಜ್‌ ಅವರು ಇತ್ತ ಟ್ವೀಟ್‌ ಮಾಡಿ ಸ್ಪಷ್ಟನೆ ನೀಡುತ್ತಲೇ, ಅತ್ತ ಸಚಿವ ಹರ್ಷವರ್ಧನ ಅವರು ತಮ್ಮ ಅಭಿನಂದನಾ ಟ್ವೀಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ.

ಈ ಕುರಿತು ಸುದ್ದಿಗಳು ವ್ಯಾಪಕವಾಗಿ ಹರಿದಾಡತೊಡಗಿದ ಬೆನ್ನಲ್ಲೇ ಈ ಬಗ್ಗೆ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿರುವ ಸುಷ್ಮಾ ಸ್ವರಾಜ್, ಆಂಧ್ರ ಪ್ರದೇಶದ ರಾಜ್ಯಪಾಲರನ್ನಾಗಿ ತಮ್ಮನ್ನು ನೇಮಕ ಮಾಡಿರುವ ಕುರಿತ ಸುದ್ದಿಗಳು ನಿಜವಲ್ಲ, ವಿದೇಶಾಂಗ ಇಲಾಖೆಯಿಂದ ನಿರ್ಗಮಿಸುತ್ತಿರುವ ನಾನು ನನ್ನ ಜವಾಬ್ದಾರಿಗಳ ಬಿಡುಗಡೆ ಪ್ರಕ್ರಿಯೆಗಾಗಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದೆ. ನಾನು ರಾಜ್ಯಪಾಲೆಯಾಗಿ ನೇಮಕವಾದೆ ಎಂದು ಸುದ್ದಿ ಹರಡಲು ಇಷ್ಟೇ ಸಾಕಾಯಿತು ಎಂದು ಟ್ವೀಟ್ ಮಾಡಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: