Advertisements

ಸೂಲಿಬೆಲೆಗೆ ದೇಶದ್ರೋಹಿ ಪಟ್ಟವೇ…. ಬಿಜೆಪಿ ಗೆಲ್ಲಿಸಲು ಕಾರಣರಾದವರಿಗೆ ಅನ್ಯಾಯ…

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಪರೋಕ್ಷವಾಗಿ ದೇಶದ್ರೋಹಿ ಎಂದು ಕರೆದಿದ್ದಾರೆ. ಅವರ ಹೇಳಿಕೆ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ.

ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಯಾರೋ ಕುಳಿತುಕೊಂಡು ಟ್ವೀಟ್ ಮಾಡುತ್ತಾರೆ. ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್‍ಗೆ ಸೇರುತ್ತಾರೆ. ಭಾಷಣಗಳಿಂದ, ಟ್ವೀಟ್‍ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ. ಇಂತಹ ಮಾತುಗಳು ಹಾಗೂ ಜನರ ಬಗ್ಗೆ ಬಹಳ ನೋವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಕರ್ನಾಟಕದಲ್ಲಿ 25 ಸಂಸದರು ಗೆಲ್ಲುವಲ್ಲಿ ಚಕ್ರವರ್ತಿ ಸೂಲಿಬೆಲೆಯ ಪಾತ್ರವೂ ಇದೆ ಅನ್ನುವುದನ್ನು ಇವರು ಮರೆತಿರುವುದು ದುರಂತವೇ ಸರಿ.

Advertisements

Leave a Reply

%d bloggers like this: