Advertisements

ನನ್ನ ಕಾರಣದಿಂದ ಯಡಿಯೂರಪ್ಪ ಸಿಎಂ ಆಗಿದ್ದಾರೆ…. ! ಇದು ಅನರ್ಹ ಶಾಸಕರೊಬ್ಬರ ಮಾತು

ನನ್ನ ಕಾರಣದಿಂದಾಗಿ ಯಡಿಯೂರಪ್ಪ ಇಂದು ಮುಖ್ಯಮಂತ್ರಿಯಾಗಿದ್ದಾರೆ ಎಂದು ಅನರ್ಹ ಶಾಸಕ ಎಚ್‌. ವಿಶ್ವನಾಥ್‌ ತಿಳಿಸಿದ್ದಾರೆ.

ಸುತ್ತೂರು ಮಠಕ್ಕೆ ಭೇಟಿ ಕೊಟ್ಟ ಬಳಿಕ ಮಾತನಾಡಿದ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೆ ಯಾವುದೇ ಚರ್ಚೆ ನಡೆಸಿಲ್ಲ. ಅವರನ್ನು ಫುಲ್ ಫ್ರೀ ಬಿಟ್ಟಿದ್ದೇವೆ ಅಂದರು.

ಇದೇ ವೇಳೆ ಉಪ ಚುನಾವಣೆ ಕುರಿತಂತೆ ಮಾತನಾಡಿದ ವಿಶ್ವನಾಥ್, ಮುಂಬರುವ ಉಪಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ನಾನು ಅಥವಾ ನನ್ನ ಕುಟುಂಬದ ಸದಸ್ಯರೊಬ್ಬರು ಸ್ಪರ್ಧಿಸಲಿದ್ದಾರೆ. ಯಾವುದೇ ಕಾರಣಕ್ಕೂ ಉಪಚುನಾವಣೆಯಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

Advertisements

Leave a Reply

%d bloggers like this: