Advertisements

ಜೈಲಿನಲ್ಲಿರುವ ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ

ದೆಹಲಿಯ ಹೈಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮುಕ್ತಾಯವಾಗಿದೆ.

ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಧೀಶರು ಕಾಯ್ದಿರಿಸಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಜಾಮೀನು ದೊರೆತು ಹೊರ ಬಂದರೆ ಸಿಬಿಐ ಅವರನ್ನು ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಜಾಮೀನು ಅರ್ಜಿ ತಿರಸ್ಕೃತಗೊಂಡು ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿಯೇ ಉಳಿದ್ರೆ, ಸಿಬಿಐ ಬಾಡಿ ವಾರೆಂಟ್ ಮೂಲಕ ಡಿಕೆಶಿಯವರನ್ನು ವಶಕ್ಕೆ ಪಡೆಯಬಹುದಾಗಿದೆ.

ಹೀಗಾಗಿ ಇದಕ್ಕೆ ಪೂರಕ ಅನ್ನುವಂತೆ ತಿಹಾರ್ ಜೈಲಿನಲ್ಲಿರುವ ಡಿಕೆಶಿಗೆ ಮತ್ತೊಂದು ಕಂಟಕ ಶುರುವಾಗಿದೆ. ಇಂದು ಡಿಕೆ ಶಿವಕುಮಾರ್ ಮಾಲೀಕತ್ವದ ದೆಹಲಿಯ ಸಫ್ದರ್ ಜಂಗ್ ಎನ್‍ಕ್ಲೇವ್ ಬಿ-4/17 ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರಂತೆ.

Advertisements

Leave a Reply

%d bloggers like this: