Advertisements

ಹೈಕಮಾಂಡ್ ಜೊತೆ ಚರ್ಚಿಸಿ ಸರ್ಕಾರ ರಚಿಸಿದ್ದು ದೇವೇಗೌಡರು : ಸಿದ್ದರಾಮಯ್ಯ

ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಪಟ್ಟಕೊಡಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಲಿಲ್ಲ ಅನ್ನುವ ದೇವೇಗೌಡರ ಮಾತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಏಕೈಕ ಉದ್ದೇಶದಿಂದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಹೈಕಮಾಂಡ್ ಸೂಚಿಸಿತ್ತು. ಹೈಕಮಾಂಡ್ ಆದೇಶವನ್ನು ನಾನು ಪಾಲಿಸಿದೆ. ಇದರಲ್ಲಿ ನನ್ನ ಪಾತ್ರ ಇಷ್ಟೆ. ಹೈಕಮಾಂಡ್ ಜೊತೆ ಚರ್ಚಿಸಿದ್ದು, ಸರ್ಕಾರ ರಚಿಸಿದ್ದು ದೇವೇಗೌಡರು. ನಾನು ಯಾರ ಮುಖ್ಯಮಂತ್ರಿ ಪಟ್ಟವನ್ನು ತಪ್ಪಿಸಿಲ್ಲ ಅಂದಿದ್ದಾರೆ.

ಇದೇ ವೇಳೆ ಸಚಿವ ಸಿಟಿ ರವಿ ಕಾಂಗ್ರೆಸ್‍ನಿಂದ ಇನ್ನು ಕೆಲವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತಿಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ  ಉಪಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಸ್ ಪಕ್ಷದಿಂದ ಇನ್ನಷ್ಟು ಜನ ನಮ್ಮ ಪಕ್ಷಕ್ಕೆ ಬರುತ್ತಾರೆಂದು ಸಿಟಿ ರವಿ ಅವರು ಹೇಳಿದ್ದಾರಂತೆ. ಮೊದಲು ಬಿಜೆಪಿ ಬಿಟ್ಟು ಹೋಗುತ್ತಿರುವವರನ್ನು ತಡೆಯಲಿ, ಆಮೇಲೆ ಬೇರೆ ಮಾತು. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಹೇಳಿಕೆಗಳನ್ನು ಕೇಳಿ ಕೇಳಿ ಸಾಕಾಗಿದೆ ಅಂದಿದ್ದಾರೆ.

Advertisements

Leave a Reply

%d bloggers like this: