ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಪಲ್ಟಿ; ಓರ್ವ ಸಾವು

ಸಾರಿಗೆ ಸಂಸ್ಥೆಯ ಬಸ್ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, 25 ಮಂದಿ ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣದ ಹಿರೀಸಾವೆ ಗ್ರಾಮದಲ್ಲಿ ನಡೆದಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮಗುಚಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಇನೋವಾ ಕಾರಿಗೂ ಬಸ್​ ಡಿಕ್ಕಿ ಹೊಡೆದಿದೆ. ಈ ವೇಳೆ ಬಂಟ್ವಾಳ ತಾಲೂಕಿನ ಮಾನಿ ಗ್ರಾಮದ ಅಭಿಷೇಕ್(29) ಮೃತಪಟ್ಟಿದ್ದಾರೆ.

46 ಮಂದಿ ಪ್ರಯಾಣಿಕರನ್ನು ತುಂಬಿಕೊಂಡ ಬಸ್ ಮಂಗಳೂರು ಕಡೆಯಿಂದ ಬೆಂಗಳೂರು ಕಡೆ ತೆರಳುತಿತ್ತು. ಈ ವೇಳೆ ಹಿರೀಸಾವೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವಘಡಕ್ಕೀಡಾಗಿದೆ.

ಬಸ್​​​ನಲ್ಲಿ 46 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 24 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: