ಅವನೇ ಶ್ರೀಮನ್ನಾರಾಯಣ ಟ್ರೈಲರ್ ಗೆ ಮೆಚ್ಚುಗೆ ಮಹಾಪೂರ…

ಅವನೇ ಶ್ರೀಮನ್ನಾರಾಯಣ’ ಸಿನಿಮಾ ಡಿಸೆಂಬರ್ 27ಕ್ಕೆ ವಿಶ್ವದಾದ್ಯಂತ ತೆರೆಗೆ ಬರುತ್ತಿದೆ. ಈ ನಡುವೆ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಟ್ರೇಲರ್ ನಲ್ಲಿ ಸಾಕಷ್ಟು ಸೃಜನಶೀಲತೆ ಎದ್ದು ಕಾಣಿಸಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲೂ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಸ್ಟಾರ್ ನಟರು ಈ ಚಿತ್ರಕ್ಕೆ ಬೆಂಬಲ ನೀಡಿದ್ದಾರೆ.

ಟ್ರೈಲರ್​ ನಲ್ಲಿ ರಕ್ಷಿತ್​ ಪೊಲೀಸ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದಾನೊಂದು ಕಾಲದಲ್ಲಿ ಎಂದು ನಿರ್ಜನ ಪ್ರದೇಶವೊಂದರಲ್ಲಿ ಕಟ್ಟಿಗೆಯ ಮನೆಯೊಂದು ಕಾಣಿಸುವುದರಿಂದ ದೃಶ್ಯ ಪ್ರಾರಂಭವಾಗುತ್ತದೆ.

ಈ ಡಕಾಯಿತರ ಗುಂಪನ್ನು ಎದುರಿಸಲು ರಕ್ಷಿತ್​ ಪೊಲೀಸ್​ ಆಗಿ ಬರುತ್ತಾರೆ. ನಂತರ ಕಳ್ಳರ ಗುಂಪನ್ನು ಅವರ ಶೈಲಿಯಲ್ಲಿ ಎದುರಿಸುವ ರೀತಿ ದೃಶ್ಯ ತೋರಿಸುತ್ತದೆ. ನಾಯಕಿ ಶಾನ್ವಿ ಶ್ರೀವಾಸ್ತವ್​ ಕೂಡ ಎರಡು ದೃಶ್ಯಗಳಲ್ಲಿ ಬಂದು ಹೋಗುತ್ತಾರೆ.

ಚಂಬಲ್​ ಕಣಿವೆಯ ಡಕಾಯಿತರ ಗುಂಪಿನಂತೆ ಕಾಣುವ ಕಳ್ಳರ ಜೊತೆ ರಕ್ಷಿತ್​ ಸೆಣಸಾಡುವ ದೃಶ್ಯಗಳನ್ನು ಕಾಣಬಹುದು. ರಕ್ಷಿತ್​ ರ ಕಚಗುಳಿ ಇಡುವ ಮಾತುಗಳಿಂದ ಟ್ರೈಲರ್​ ಗಮನ ಸೆಳೆದಿದೆ.

ಬಿಡುಗಡೆಯಾದ ಒಂದೇ ದಿನದಲ್ಲಿ ಶುಕ್ರವಾರ, ನ.29 ರ ಹೊತ್ತಿಗೆ ಟ್ರೈಲರ್​ 40 ಲಕ್ಷ ವೀಕ್ಷಣೆಯನ್ನು ದಾಟಿದೆ. 4.14 ನಿಮಿಷದ ಈ ಟ್ರೈಲರ್​ ಪ್ರೇಕ್ಷಕನಿಗೆ ಮೆಚ್ಚುಗೆಯಾಗಿದ್ದು ಚಿತ್ರದ ಬಗ್ಗೆ ಭರವಸೆ ಹೆಚ್ಚಿಸಿದೆ.

ಪ್ರೇಕ್ಷಕರು ಸೇರಿದಂತೆ ಅನೇಕ ಸಿನಿ ತಾರೆಯರು ಚಿತ್ರದ ಟ್ರೈಲರ್​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶ್ರೀಮನ್ನಾರಾಯಣ ಚಿತ್ರವು ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಟ್ರೈಲರ್​ ಈ 5 ಭಾಷೆಗಳಲ್ಲಿ ಬಿಡುಗಡೆಯಾಗಿದ್ದು ಎಲ್ಲ ವರ್ಗದ ಪ್ರೇಕ್ಷಕರನ್ನು ಸೆಳೆಯುತ್ತಿದೆ.

80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಶ್ರೀಮನ್ನಾರಾಯಣ ಚಿತ್ರವನ್ನು ಸಚಿನ್​ ರವಿ ನಿರ್ದೇಶನ ಮಾಡಿದ್ದಾರೆ. ಪುಷ್ಕರ ಮಲ್ಲಿಖಾರ್ಜುನಯ್ಯ ಮತ್ತು ಎ ಕೆ ಪ್ರಕಾಶ್​ ಬಂಡವಾಳ ಹೂಡಿದ್ದಾರೆ. ಬಿ ಅಜನೀಶ್​ ಲೋಕನಾಥ್​ ಮತ್ತು ಚರಣ್​ ರಾಜ್​ ಸಂಗೀತ ನೀಡಿದ್ದಾರೆ.

ಅವನೇ ಶ್ರೀಮನ್ನಾರಾಯಣ ನವಿರು ಪ್ರೇಮ ಮತ್ತು ಹಾಸ್ಯ ಮಿಶ್ರಿ ಕಥೆಯಾಗಿದೆ. ಕರ್ಮ್​ ಚಾವ್ಲಾ ಅವರ ಛಾಯಾಗ್ರಹಣವಿದೆ.

ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ ಮತ್ತು ಶಾನ್ವಿ ಶ್ರೀವಾಸ್ತವ್ ಒಳಗೊಂಡಂತೆ ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ, ಬಾಲಾಜಿ ಮನೋಹರ್​ ತಾರಾಗಣದಲ್ಲಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: