Advertisements

ಬಿಜೆಪಿಯಷ್ಟೆ ಜೆಡಿಎಸ್ ನಮಗೆ ರಾಜಕೀಯ ವೈರಿ – ಸಿದ್ದರಾಮಯ್ಯ

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಚಾರ ಕುರಿತಂತೆ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಅಂತಹ ಯಾವುದೇ ವಿದ್ಯಮಾನ ಇಲ್ಲ ಎಂದಿದ್ದಾರೆ. ಈ ಮೂಲಕ ಖರ್ಗೆ ಯವರ ಸಿಎಂ ಕುರ್ಚಿ ಕನಸಿಗೆ ತಣ್ಣೀರು ಎರಚಿದ್ದಾರೆ.

ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಡಿಸೆಂಬರ್ 9ರ ನಂತ್ರ ಸಿಹಿ ಹಂಚುತ್ತಾರೆ ಎಂದು ಕುಮಾರಸ್ವಾಮಿ ಹೇಳಿರೋದು ನನಗೆ ಗೊತ್ತಿಲ್ಲ. ಸಿಹಿ ಹಂಚುತ್ತಾರೆ ಅಂದ್ರೆ 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ ಎಂದು ಅರ್ಥ ಅಂದಿದ್ದಾರೆ.

ಇದೇ ವೇಳೆ ಜೆಡಿಎಸ್‌ನೊಂದಿಗೆ ಯಾವುದೇ ಒಳಒಪ್ಪಂದ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿರುವ ಸಿದ್ದರಾಮಯ್ಯ ಬಿಜೆಪಿಯಷ್ಟೆ ಜೆಡಿಎಸ್ ಸಹ ನಮಗೆ ರಾಜಕೀಯ ವೈರಿ ಅಂದಿದ್ದಾರೆ.

Advertisements

Leave a Reply

%d bloggers like this: