ಪಾರ್ಲೆ-ಜಿ ಬಿಸ್ಕತ್ತು ಮಕ್ಕಳಿಗೆ ಮಾತ್ರವಲ್ಲ ಎಲ್ಲಾ ವರ್ಗದ ಮಂದಿಗೂ ಅಚ್ಚುಮೆಚ್ಚು. ಅದರಲ್ಲಿ ಮಕ್ಕಳ ಪಾಲಿಗೆ ಫೇವರಿಟ್ ಬಿಸ್ಕತ್ತು.
ಮಕ್ಕಳ ಗಮನ ಸೆಳೆದಿರುವ ಬಿಸ್ಕತ್ತು ಫ್ಯಾಕ್ಟರಿಯಲ್ಲೇ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಂಡಿರುವ ಅಮಾನವೀಯ ಘಟನೆ ಇದೀಗ ಬೆಳಕಿಗೆ ಬಂದಿದೆ.
ರಾಯ್ಪುರ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಿದ ಜಿಲ್ಲಾ ರಕ್ಕಣಾ ವಿಭಾಗದ ಅಧಿಕಾರಿಗಳು 26 ಮಕ್ಕಳನ್ನು ಪಾರ್ಲೆ-ಜಿ ಬಿಸ್ಕೆಟ್ ಫ್ಯಾಕ್ಟರಿಯಿಂದ ರಕ್ಷಿಸಿದ್ದಾರೆ.
ರಾಯ್ಪುರದ ಅಮಸಿವ್ನಿ ಪ್ರದೇಶದ ಫ್ಯಾಕ್ಟರಿಯಲ್ಲಿ 12ರಿಂದ 16 ವರ್ಷದೊಳಗಿನ ಮಕ್ಕಳು ಕೆಲಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಪಡೆದು ಫ್ಯಾಕ್ಟರಿಗೆ ಹೋಗಿ ಕಾರ್ಯಾಚರಣೆ ನಡೆಸಿದಾಗ ಬೆಳಕಿಗೆ ಬಂದಿದೆ. ಮಧ್ಯ ಪ್ರದೇಶ, ಜಾರ್ಖಂಡ್, ಒಡಿಶಾ ಮತ್ತು ಬಿಹಾರ ಮೂಲದ ಮಕ್ಕಳಾಗಿದ್ದರು.
ಮಕ್ಕಳು ನೀಡಿರುವ ಮಾಹಿತಿ ಪ್ರಕಾರ ಅವರು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತಿಂಗಳಿಗೆ 5ರಿಂದ 7 ಸಾವಿರ ರೂಪಾಯಿ ವೇತನಕ್ಕೆ ದುಡಿಯುತ್ತಿದ್ದರು ಎಂದು ಜಿಲ್ಲಾ ಮಕ್ಕಳ ರಕ್ಷಣೆ ಅಧಿಕಾರಿ ನವನೀತ್ ಸ್ವರ್ಣಾಂಕರ್ ತಿಳಿಸಿದ್ದಾರೆ.
ದೇಶದಲ್ಲಿ ಬ್ರಾಂಡ್ ಕಂಪೆನಿಯಾಗಿ ಗುರುತಿಸಿಕೊಂಡಿರುವ ಪಾರ್ಲೆ-ಜಿ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ದುರದೃಷ್ಟಕರ ಎನ್ನುತ್ತಾರೆ ಜಿಲ್ಲಾ ಕಾರ್ಯ ನಿರ್ವಹಣಾಧಿಕಾರಿ ಸಮೀರ್ ಮಾಥುರ್.
ಇದೀಗ ಫ್ಯಾಕ್ಟರಿ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
Discussion about this post