ಜೈಷ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ. ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆದಿದ್ದು, ಜೈಶ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಹತ್ಯೆ ಮಾಡಿವೆ.
ಖಚಿತ ಮಾಹಿತಿಯ ಹಿನ್ನಲೆಯಲ್ಲಿ ಭಾರತೀಯ ಯೋಧರು ಈ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರ ಹತ್ಯೆ ಬಳಿಕವೂ ಬೇರೆ ಉಗ್ರರು ಅಡಗಿರಬಹುದೇ ಅನ್ನುವ ಕುರಿತಂತೆ ಸರ್ಚ್ ಆಪರೇಷನ್ ಮುಂದುವರಿಸಲಾಗಿದೆ.
ಈ ವೇಳೆ ಎಲ್ಲ ಉಗ್ರರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದ ಮೂವರು ಉಗ್ರರ ಪೈಕಿ ಒಬ್ಬ ಜುಲೈ 23ರಂದು ಕಾಶ್ಮೀರದ ಸರ್ಕಾರಿ ಹೈಸ್ಕೂಲ್ ಜವಾನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಗೊತ್ತಾಗಿದೆ.
Discussion about this post