ಬೆಂಗಳೂರು : ಸರಕಾರಿ ಶಿಕ್ಷಕರಾಗಲು ಕಾಯುತ್ತಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದ್ದು, ಈ ಮೂಲಕ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಈ ಬಗ್ಗೆ ಮಾಹಿತಿ ಕೊಟ್ಟಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶೀಘ್ರದಲ್ಲೇ 5000 ಶಿಕ್ಷಕರ ನೇಮಕಾತಿ ಮಾಡುವುದಾಗಿ ಹೇಳಿದ್ದಾರೆ, ಕೊರೋನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಶಿಕ್ಷಕರ ನೇಮಕಾತಿಯಾಗಿಲ್ಲ. ಹೀಗಾಗಿ ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದೆ.
ಈ ಹಿಂದೆ 10 ಸಾವಿರ ಶಿಕ್ಷಕರ ನೇಮಕಾತಿ ಮಾಡಲು ತೀರ್ಮಾನಿಸಿ TET ಮತ್ತು CET ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಯಲ್ಲಿ ಕೇವಲ 3000 ಮಂದಿ ಮಾತ್ರ ತೇರ್ಗಡೆ ಹೊಂದಿದ್ದರು. ಹೀಗಾಗಿ ಮತ್ತೊಮ್ಮೆ ಪರೀಕ್ಷೆ ನಡೆಸಿ 5000 ಶಿಕ್ಷಕರ ನೇಮಕ ಮಾಡಲು ತೀರ್ಮಾನಿಸಲಾಗಿದೆ.
ಈ ಸಂಬಂಧ ಶೀಘ್ರದಲ್ಲೇ ಸಿಇಟಿ ಪರೀಕ್ಷೆ ಆದೇಶ ಹೊರ ಬೀಳಲಿದೆ ಎಂದು ಬಿಸಿ ನಾಗೇಶ್ ಹೇಳಿದ್ದಾರೆ.
Discussion about this post