ರಾಜ್ಯದಲ್ಲಿ ಡೆಂಘೀ ಜ್ವರದ ಅಬ್ಬರ ಏರುತ್ತಿದೆ, ರಾಜ್ಯದ ಅನೇಕ ಭಾಗಗಳಲ್ಲಿ ಜ್ವರ ಪೀಡಿತರ ಸಂಖ್ಯೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ.
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ತೀವ್ರವಾಗಲಾರಂಭಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಿರುವುದು ಹೊಸ ತಲೆನೋವಿಗೆ ಕಾರಣವಾಗಿದೆ.
ಈ ನಡುವೆ ಮುಂಗಾರು ಪ್ರಾರಂಭವಾಗುತ್ತಿದ್ದಂತೆ ವಾರ್ಷಿಕ ಸಾಂಕ್ರಾಮಿಕ ರೋಗಗಳ ಅಬ್ಬರ ಕೂಡಾ ಕಾಣಿಸಿಕೊಳ್ಳುತ್ತಿದೆ. ಮಲೇರಿಯಾ ಡೆಂಗ್ಯೂ ಕಾಟ ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಇದೇ ಡೆಂಘೀ ಜ್ವರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬೀಡಿಕೆರೆ ಗ್ರಾಮದಲ್ಲಿ 6 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.
ಮೃತ ಬಾಲಕಿಯನ್ನು ಬೀಡಿಕೆರೆ ಗ್ರಾಮದ ಸವಿತಾ ಹಾಗೂ ಮುನಿರಾಜು ದಂಪತಿಯ ಪುತ್ರಿ ಚಾರಲತಾ (6) ಎಂದು ಗುರುತಿಸಲಾಗಿದೆ. ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಚಾರುಲತಾಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪುಟ್ಟ ಕಂದಮ್ಮ ಕಣ್ಣು ಮುಚ್ಚಿದೆ.
Discussion about this post