ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ಬಾದಾಮಿಯಲ್ಲಿ 14 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.
ಈ ನಡುವೆ ಜಿಲ್ಲಾಧಿಕಾರಿ ಸೇರಿದಂತೆ ಬಾದಾಮಿ ತಾಲೂಕು ಮಟ್ಟದ ಅಧಿಕಾರಿಗಳನ್ನು ಫೋನ್ ಮೂಲಕ ಸಂಪರ್ಕಿಸಿದ ಸಿದ್ದರಾಮಯ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲೂಕು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಲಿಗೆ ಅವರು ಸೂಚನೆ ನೀಡಿದ್ದಾರೆ
Discussion about this post