ನವದೆಹಲಿ : ದೇಶದ ವಿವಿಧ ಭಾಗಗಳಲ್ಲಿ ಕೊರೋನಾ ಸೋಂಕಿನ ಅಬ್ಬರ ಮತ್ತೆ ತೀವ್ರವಾಗತೊಡಗಿದೆ.
ಕರ್ನಾಟಕ ಅದರಲ್ಲೂ ಬೆಂಗಳೂರಿನಲ್ಲಿ ಕೊರೋನಾ ಎರಡನೆ ಅಲೆಯ ಮುನ್ಸೂಚನೆ ಸಿಕ್ಕಿದ್ದು, ಆತಂಕ ಪ್ರಾರಂಭವಾಗಿದೆ.
ಈ ನಡುವೆ ಪ್ರವಾಸಿಗರ ನೆಚ್ಚಿನ ತಾಣವಾದ ತಮಿಳುನಾಡಿನ ನೀಲಗಿರಿಸ್ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ.
ಜೊತೆಗೆ ಮಾಸ್ಕ್ ಧರಿಸಿದವರಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ಕೂಡಾ ಜಾರಿ ಮಾಡಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ರೆ 200 ರೂಪಾಯಿ ದಂಡ ಹಾಗೂ 6 ತಿಂಗಳು ಜೈಲು ಶಿಕ್ಷೆ ವಿಧಿಸುವ ಕುರಿತಂತೆ ಜಿಲ್ಲಾಧಿಕಾರಿ ಜೆ. ಇನ್ನೋಸೆಂಟ್ ದಿವ್ಯಾ ಅವರು ಆದೇಶ ಹೊರಡಿಸಿದ್ದಾರೆ.
Discussion about this post