ತಿರುವನಂತಪುರ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಒಂದಿಷ್ಟು ಸೀಟುಗಳನ್ನು ಗಳಿಸಲೇಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಇನ್ನಿಲ್ಲದ ಶ್ರಮ ಹಾಕುತ್ತಿದೆ.
ಈ ನಡುವೆ ಚುನಾವಣಾ ಆಯೋಗ ಬಿಜೆಪಿ ಶಾಕಿಂಗ್ ಸುದ್ದಿ ಕೊಟ್ಟಿದೆ.
ಒಟ್ಟು ಮೂರು ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿರುವ ಆಯೋಗ, ಕೇಸರಿ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ತಲಚೇರಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪಕ್ಷದ ಕಣ್ಣೂರು ಜಿಲ್ಲಾ ಘಟಕ ಅಧ್ಯಕ್ಷ ಹರಿದಾಸ್, ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ನಿವೇದಿತಾ ಸುಬ್ರಮಣ್ಯಂ ಅವರ ನಾಮಪತ್ರವನ್ನೂ ತಿರಸ್ಕರಿಸಲಾಗಿದೆ.
ಅಭ್ಯರ್ಥಿಗಳು ನೀಡಿದ ಫಾರಂ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಹಿ ಇಲ್ಲ ಅನ್ನುವ ಕಾರಣ ನೀಡಲಾಗಿದೆ.
ಈ ನಡುವೆ ಇಡುಕ್ಕಿಯ ದೇವಿಕುಲಂ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಧನಲಕ್ಷ್ಮಿ ಅವರ ನಾಮಪತ್ರವನ್ನೂ ತಿರಸ್ಕರಿಸಲಾಗಿದೆ.
ಫಾರಂ ಅನ್ನು ಸಂಪೂರ್ಣವಾಗಿ ಭರ್ತಿ ಮಾಡಿಲ್ಲ ಅನ್ನೋ ಕಾರಣಕ್ಕೆ ಇವರ ನಾಮಪತ್ರ ತಿರಸ್ಕೃತಗೊಂಡಿದೆ.
ಇದೀಗ ಇಬ್ಬರು ಬಿಜೆಪಿ ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕರಿಸಿರುವುದು ಪ್ರಶ್ನಿಸಿ ಬಿಜೆಪಿ ಚುನಾವಣಾಧಿಕಾರಿಗಳ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದೆ.
Discussion about this post