ಬೆಂಗಳೂರು : ಸಿಎಂ ಯಡಿಯೂರಪ್ಪ ಎರಡನೆ ಬಾರಿಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದು, ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಮೊದಲ ಬಾರಿ ಸೋಂಕಿಗೆ ತುತ್ತಾಗಿದ್ದ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಎರಡನೇ ಬಾರಿಗೆ ಸೋಂಕಿಗೆ ತುತ್ತಾದ ವೇಳೆಯಲ್ಲೂ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕನಿಷ್ಟ ಈ ಬಾರಿಯಾದರೂ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಮೂಲಕ, ಜನರಲ್ಲಿ ಸರ್ಕಾರಿ ಆಸ್ಪತ್ರೆಯ ಬಗ್ಗೆ ನಂಬಿಕೆ ಹುಟ್ಟಿಸಬಹುದಿತ್ತು.
ಕೆಲ ದಿನಗಳಿಂದ ಜ್ವರ ಮತ್ತು ಸುಸ್ತಿನಿಂದ ಬಳಲುತ್ತಿದ್ದ ಯಡಿಯೂರಪ್ಪ ರೆಸ್ಟ್ ಪಡೆದಿದ್ದರು. ಇದಾದ ಬಳಿಕ ಇಂದು ಕೊರೋನಾ ನಿಯಂತ್ರಣ ಸಲುವಾಗಿ ಅಧಿಕಾರಿಗಳು ಹಾಗೂ ಸಚಿವರ ಸಭೆ ನಡೆಸಿದ್ದ ಸಿಎಂ ಹಲವು ಸೂಚನೆಗಳನ್ನು ಪಡೆದಿದ್ದರು. ಇದಾದ ಬಳಿಕ ತೀವ್ರ ಸುಸ್ತು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ವೈದ್ಯರು ತಪಾಸಣೆಗೆ ಒಳಗಾಗಿದ್ದರು. ಈ ವೇಳೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
Discussion about this post