ಬೆಂಗಳೂರು : ಯಾವುದಾದರೂ ಒಂದು ಮಾದರಿಯಲ್ಲಿ ಪಿಯುಸಿ ಪರೀಕ್ಷೆಗಳನ್ನು ನಡೆಸಬೇಕಾದ ಅನಿವಾರ್ಯ ಇದ್ದು, ಹೀಗಾಗಿ ಪಿಯುಸಿ ಪರೀಕ್ಷೆ ನಡೆಸಲೇಬೇಕಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪ್ರೋಖಿಯಾಲ್ ನೇತೃತ್ವದಲ್ಲಿ ನಡೆದ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇ ರಾಜ್ಯ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ಸರ್ವ ಸನ್ನದ್ಧವಾಗಿದೆ. ಜುಲೈ ನಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾದ್ರೆ, ಆಗಸ್ಟ್ ನಲ್ಲಿ ಫಲಿತಾಂಶ ಘೋಷಿಸಬಹುದಾಗಿದೆ ಅಂದಿದ್ದಾರೆ.
ರಾಜ್ಯದಲ್ಲಿ ದ್ವೀತಿಯ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಪ್ರಶ್ನೆ ಪತ್ರಿಕೆಗಳು ಸಿದ್ದವಾಗಿದೆ. ಈ ಬಾರಿ ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಈ ಮೂಲಕ ಸಂಪೂರ್ಣ ಸುರಕ್ಷಿತವಾಗಿ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿದೆ ಅಂದಿದ್ದಾರೆ. ಜುಲೈ ತಿಂಗಳಲ್ಲಿ ಪರೀಕ್ಷೆಗಳು ನಡೆದರೆ, ಆಗಸ್ಟ್ ತಿಂಗಳಲ್ಲಿ ನೀಟ್, ಜೆಇಇ,ಸಿಇಟಿ, ಐಸಿಎಆರ್ ನಂತರ ಸ್ಪರ್ಧಾತ್ಮಕ ಕೋರ್ಸ್ ಗಳ ಪರೀಕ್ಷೆಗಳನ್ನು ನಡೆಸಬಹುದಾಗಿ ಅಂದಿದ್ದಾರೆ.
ಇನ್ನು ಕೊರೋನಾ ಕಾರಣದಿಂದ ಯಾವುದಾದರೂ ವಿದ್ಯಾರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದಿದ್ರೆ, ಇದೇ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆ ವಕಾಶ ಕಲ್ಪಿಸುವ ಯೋಜನೆಯನ್ನು ಕೂಡಾ ರಾಜ್ಯ ಶಿಕ್ಷಣ ಇಲಾಖೆ ಹೊಂದಿದೆ ಅಂದಿರುವ ಸಚಿವರು ಕಳೆದ ಬಾರಿ ಕೊರೋನಾ ಸಂದರ್ಭದಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಿದ ರೀತಿಯನ್ನು ವಿವರಿಸಿದ್ದಾರೆ.
Discussion about this post