ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತುಂಬಾ ಕಡಿಮೆಯಾಗುತ್ತಿದೆ. ಆದರೆ ಸಾವಿನ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 5 ಸಾವಿರಕ್ಕೆ ಇಳಿದರೂ ಸಾವಿನ ಸಂಖ್ಯೆ 300ರ ಗಡಿ ದಾಟುತ್ತಿದೆ. ಮೊದಲ ಅಲೆಗೆ ಹೋಲಿಸಿದರೆ ಈ ಸಾವಿನ ಸಂಖ್ಯೆ ಭಯ ಹುಟ್ಟಿಸುತ್ತಿದೆ.
ಈ ಆತಂಕದ ನಡುವೆ ಮತ್ತೊಂದು ಸುದ್ದಿ ಬಂದಿದ್ದು, ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 70% ಕ್ಕೂ ಹೆಚ್ಚು ಮಂದಿಯ ಸ್ಥಿತಿ ತುಂಬಾ ಗಂಭೀರವಾಗಿದೆಯಂತೆ. ಕೆಲವರು ಅತೀ ಗಂಭೀರ ಸ್ಥಿತಿಯಲ್ಲಿರುವುದನ್ನು ನೋಡಿದರೆ ರಾಜಧಾನಿಯಲ್ಲಿ ಮರಣ ಮಾರುತ ಬೀಸಲಿದೆಯೇ ಅನ್ನುವ ಆತಂಕ ಸೃಷ್ಟಿಯಾಗಿದೆ.
ಕಳೆದ ಸೋಮವಾರ ಮಧ್ಯಾಹ್ನ 3 ಗಂಟೆಯ ವೇಳೆ 7550 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಪೈಕಿ 5258 ಮಂದಿಯ ಆರೋಗ್ಯ ಗಂಭೀರವಾಗಿದೆ.
ಈ ಕಾರಣದಿಂದಲೇ ನಗರದ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಲ್ ಬೆಡ್ ಖಾಲಿ ಇದ್ದು, 5 ಸಾವಿರಕ್ಕೂ ಹೆಚ್ಚು ಬೆಡ್ ಗಳಲ್ಲಿ ಜನರೇ ಇಲ್ಲ. ಆದರೆ ಎಚ್.ಡಿ.ಯು, ಐಸಿಯು, ವೆಂಟಿಲೇಟರ್ ಸಹಿಯ ಐಸಿಯು ಬೆಡ್ ಗಳು ಬಹುತೇಕ ಭರ್ತಿಯಾಗಿದೆ. ಹೀಗಾಗಿ ಗಂಭೀರಗೊಂಡ ಬಳಿಕ ಆಸ್ಪತ್ರೆ ಬಾಗಿಲು ತಟ್ಟುವವರಿಗೆ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ.
Discussion about this post