ಕೊರೋನಾ ಕಾರಣದಿಂದ ರಾಜ್ಯದಲ್ಲಿ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸುವ ಕುರಿತಂತೆ ಗೊಂದಲಗಳು ಮುಂದುವರಿದಿತ್ತು. ಇದೀಗ CBSC ಹಾಗೂ ICSEಯ ದ್ವೀತಿಯ ಪಿಯುಸಿ ಪರೀಕ್ಷೆಗಳು ರದ್ದುಗೊಂಡ ಬೆನ್ನಲ್ಲೇ ರಾಜ್ಯದಲ್ಲೂ ದ್ವೀತಿಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ಆದರೆ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸುವುದಾಗಿ ಘೋಷಿಸಿರುವ ಸುರೇಶ್ ಕುಮಾರ್, 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದ್ದಾರೆ. ಈ ಬಾರಿ 8 ಲಕ್ಷ 75 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಪರೀಕ್ಷೆ ಇಲ್ಲದೆ ಅವರ ಕಲಿಕಾ ಮಟ್ಟವನ್ನು ನಿರ್ಧರಿಸಲು ಸಾಧ್ಯವಿಲ್ಲ. ಕಳೆದ ವರ್ಷ 9ನೇ ತರಗತಿಯ ಪರೀಕ್ಷೆಗಳು ಕೂಡಾ ನಡೆದಿಲ್ಲ. ಹೀಗಾಗಿ ಸಮಾಜ ವಿಜ್ಞಾನ, ಗಣಿತ ಹಾಗೂ ವಿಜ್ಞಾನ ಸೇರಿ ಪರೀಕ್ಷೆ ನಡೆಸುತ್ತೇವೆ ಅಂದಿದ್ದಾರೆ.
ಸಮಾಜ ವಿಜ್ಞಾನ, ಗಣಿತ ಹಾಗೂ ವಿಜ್ಞಾನಕ್ಕೆ ಒಂದೇ ಪ್ರಶ್ನೆ ಪರೀಕ್ಷೆ ಇರಲಿದ್ದು, ಪರೀಕ್ಷೆ ಸಲುವಾಗಿ 6 ಸಾವಿರ ಪರೀ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಒಂದು ಡೆಸ್ಕ್ ನಲ್ಲಿ ಒಬ್ಬ ವಿದ್ಯಾರ್ಥಿಯನ್ನು ಕೂರಿಸಿ ಈ ಬಾರಿ ಪರೀಕ್ಷೆ ನಡೆಸಲಾಗುತ್ತದೆ. ಹೀಗಾಗಿ ಒಂದು ಪರೀಕ್ಷಾ ಕೊಠಡಿಯಲ್ಲಿ 10 ರಿಂದ 12 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯಲಿದ್ದಾರೆ. ಜುಲೈ ಮೂರನೇ ವಾರದಲ್ಲಿ SSLC Exam ನಡೆಯುವ ಸಾಧ್ಯತೆಗಳಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಸಚಿವ ಸುರೇಶ್ ಕುಮಾರ್, ಮಕ್ಕಳ ಆರೋಗ್ಯವೆಷ್ಟು ಮುಖ್ಯವೋ, ಅವರ ಭವಿಷ್ಯವೂ ಅಷ್ಟೇ ಮುಖ್ಯ ಅಂದಿದ್ದಾರೆ. ಹಾಗಂತ ಪರೀಕ್ಷೆ ಇದ್ದರೂ ಯಾರನ್ನೂ ಫೇಲ್ ಮಾಡೋದಿಲ್ಲ ಅನ್ನುವ ಭರವಸೆಯನ್ನು ಕೂಡಾ ಕೊಟ್ಟಿದ್ದಾರೆ.
Discussion about this post