ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಗಳಿದೆ, ಹೀಗಾಗಿ ಜೂ. 16ರವರೆಗೆ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.
ಕಳೆದ ವಾರ ರಾಜ್ಯಕ್ಕೆ ಪ್ರವೇಶ ಪಡೆದಿದ್ದ ಮುಂಗಾರು ಮಳೆ ಆರಂಭದಲ್ಲಿ ಅಬ್ಬರಿಸಿತ್ತು. ಬಳಿಕ ಮುಂಗಾರು ಮಂಕಾಗಿದೆ. ಈಗ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಚುರುಕಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದ್ದು, 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಇನ್ನು ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಜೂ.14 ಮತ್ತು 15ರಂದು ಮಳೆಯಾಗಲಿದೆ
Discussion about this post