ಚಿಕ್ಕಮಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ವರ್ಷಧಾರೆಯ ಅಬ್ಬರ ತೀವ್ರಗೊಂಡಿದ್ದು, ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಇಂದೂ ಮುಂದುವರಿದಿದೆ.
ಚಿಕ್ಕಮಗಳೂರಿನ ಕೊಪ್ಪ, ಎನ್. ಆರ್. ಪುರ, ಶೃಂಗೇರಿ ಹಾಗೂ ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದಿದ್ದು ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ಬಾಳೆಹೊನ್ನೂರು ಭಾಗದಲ್ಲಿ ಮಳೆ ಸ್ವಲ್ಪಮಟ್ಟಿಗೆ ಹಾನಿ ಮಾಡಿದೆ.
ಚಾರ್ಮಾಡಿ ಘಾಟ್, ಕೊಪ್ಪ ತಾಲೂಕಿನ ಜಯಪುರದ ಬಸರಿಕಟ್ಟೆಯಲ್ಲಿ ಮರ ಉರುಳಿ ಬಿದ್ದ ಪರಿಣಾಮ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ ಉಂಟಾಗಿದೆ. ಇನ್ನು ಭದ್ರಾ ನದಿಯಲ್ಲಿ ನೀರು ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಕಳಸ, ಹೊರನಾಡು ಸಂಪರ್ಕಿಸುವ ಹೆಬ್ಬಾಳ ಸೇತುವೆ ಮುಳುಗಲು ಎರಡು ಅಡಿ ಬಾಕಿ ಉಳಿದಿದೆ.
Discussion about this post