ಹಾಸನ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಾಸನದಲ್ಲೂ ವರುಣ ಅಬ್ಬರಿಸುತ್ತಿದ್ದಾನೆ. ಈ ನಡುವೆ ಚಿಕ್ಕಮಗಳೂರು ಭಾಗದಲ್ಲಿ ಉತ್ತಮ ಮಳೆ ಬೀಳುತ್ತಿರುವ ಕಾರಣ ಹಾಸನ ಜಿಲ್ಲೆ ಬೇಲೂರಿನ ಯಗಚಿ ಡ್ಯಾಂ ಭರ್ತಿಯಾಗಿದೆ.
900 ಕ್ಯೂಸೆಕ್ ನೀರು ಪ್ರಸ್ತುತ ಹರಿದು ಬರುತ್ತಿದ್ದು, ಅಣೆಕಟ್ಟೆಯಲ್ಲಿ 963.90 ಮೀಟರ್ ನೀರು ಸಂಗ್ರಹವಾಗಿದೆ. ಹೀಗಾಗಿ ಅಂದಾಜು 3.31 ಟಿಎಂಸಿ ನೀರು ಸಂಗ್ರಹವಾಗಿದೆ.
ಈ ಅಣೆಕಟ್ಟೆಯಲ್ಲಿ ಗರಿಷ್ಠ ಅಂದ್ರೆ 3.6 ಟಿಎಂಸಿ ನೀರು ಸಂಗ್ರಹಿಸಬಹುದಾಗಿದೆ. ಇನ್ನು ಒಳ ಹರಿವಿನ ಪ್ರಮಾಣ ಹೆಚ್ಚಾದರೆ ಅಣೆಕಟ್ಟೆಯಿಂದ ನೀರು ಹೊರ ಬಿಡುವ ಸಾಧ್ಯತೆಗಳಿದೆ.
Discussion about this post