ಬೆಳಗಾವಿ : ಕೃಷ್ಣಾ ನದಿಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗೋಪಾಲ ಬನಸುಡೆ (36), ಸದಾಶಿವ (24),ಧರೆಪ್ಪ (22) ಹಾಗೂ ಶಂಕರ ಬನಸುಡೆ ಎಂದು ಗುರುತಿಸಲಾಗಿದೆ.
ಗ್ರಾಮದಲ್ಲಿ ಜಾತ್ರೆ ಇರುವ ಕಾರಣ ಕುಟುಂಬದ ಸದಸ್ಯರ ಜೊತೆಗೆ ಬಟ್ಟೆ ತೊಳೆಯಲು ಕೃಷ್ಣಾ ನದಿಗೆ ತೆರಳಿದ್ದರು. ಈ ವೇಳೆ ಸದಾಶಿವ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾನೆ. ಆತನ ರಕ್ಷಣೆಗೆ ಧಾವಿಸಿದ ಮೂವರೂ ಸಹೋದರರು ಸದಾಶಿವನ ಜೊತೆ ನೀರು ಪಾಲಾಗಿದ್ದಾರೆ.
ಘಟನೆ ಬಳಿಕ ಸ್ಥಳಕ್ಕ ದೌಡಾಯಿಸಿರುವ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳೀಯರ ನೆರವಿನಿಂದ ಶೋಧ ಕಾರ್ಯ ನಡೆಸಿದ್ದಾರೆ.
Discussion about this post