ಯಾದಗಿರಿ : ಒಂದೇ ಕುಟುಂಬದ ಆರು ಜನ ಘಟನೆ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೆ ಇಡೀ ಕುಟುಂಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ.
ಮೃತರನ್ನು ಭೀಮರಾಯ ಸುರಪುರ (45) , ಶಾಂತಮ್ಮ ಸುರಪುರ (36), ಸುಮಿತ್ರಾ (12), ಶ್ರೀದೇವಿ (13), ಶಿವರಾಜ (6), ಲಕ್ಷ್ಮೀ (4), ಆತ್ಮಹತ್ಯೆ ಎಂದು ಗುರುತಿಸಲಾಗಿದೆ. ಕುಟುಂಬದ ಮುಖ್ಯಸ್ಥರು ವಿಪರೀತ ಸಾಲ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ತನಿಖೆ ಪೂರ್ತಿಯಾಗದ ಹೊರತು ಸತ್ಯಾಂಶ ಹೊರ ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು ಕಾರ್ಯಾಚರಣೆ ನಡೆಸಿ ಐದು ಶವಗಳನ್ನು ಮೇಲಕ್ಕೆ ಎತ್ತಿದ್ದಾರೆ.
ಸ್ಥಳಕ್ಕೆ ತಹಶೀಲ್ದಾರ ಜಗನ್ನಾಥ ರಡ್ಡಿ, ಪಿಎಸ್ಐ ಶಾಮಸುಂದರ ನಾಯಕ ಭೇಟಿ ನೀಡಿದ್ದಾರೆ.
Discussion about this post