ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಕಡೆಗಳಲ್ಲಿ 20 ಸೆಂ.ಮೀಗೂ ಅಧಿಕ ಮಳೆಯಾಗಲಿರುವ ಹಿನ್ನಲೆಯಲ್ಲಿ 11 ಜಿಲ್ಲೆಗಳಲ್ಲಿ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸುವಂತೆ ಸಲಹೆ ನೀಡಿದೆ.
ರಾಜ್ಯದೆಲ್ಲೆಡೆ ಜುಲೈ 15ರವರೆಗೆ ವ್ಯಾಪಕ ಮಳೆ ಸುರಿಯಲಿದ್ದು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಗಾಳಿ ಗುಡುಗು ಸಹಿತ ಅತ್ಯಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿದೆ. ಈ ಹಿನ್ನಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ11 ರಂದು ಹಾಗೂ ಮಲೆನಾಡಿನ ಚಿಕ್ಮಮಗಳೂರು, ಹಾಸನ, ಕೊಡಗು ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 12 ಹಾಗೂ 13 ರಂದು ರೆಡ್ ಅಲರ್ಟ್ ನೀಡಲಾಗಿದೆ.
ಜುಲೈ 11ರ ಬಳಿಕ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಕಡಿಮೆಯಾಗಲಿದ್ದು, ಈ ಭಾಗದಲ್ಲಿ 12 ಸೆಂಮೀ ಮಳೆ ನೀರೀಕ್ಷಿಸಲಾಗುತ್ತೆದೆ. ಜುಲೈ 12 ರಿಂದ 14ರ ತನಕ ಈ ಜಿಲ್ಲೆಗಳಿಗೆ ಆರೆಂಜ್ ಆಲರ್ಟ್ ಕೊಡಲಾಗಿದೆ. ಜೊತೆಗೆ ಗಾಳಿಯ ಅಬ್ಬರ ತೀವ್ರವಾಗಿರುವ ಹಿನ್ನಲೆಯಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
Discussion about this post