ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮತ್ತಷ್ಟು ತೀವ್ರವಾಗಲಿದೆ ಎಂದು ಹವಮಾನ ಇಲಾಖೆ ಹೇಳಿದ್ದು, 7 ಜಿಲ್ಲೆಗಳಿಗೆ ರೆಡ್ ಆಲರ್ಟ್ ಕೊಟ್ಟಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೊಡಲಾಗಿದ್ದು, ಜನ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಜು. 23ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದ್ದು, ಹೀಗಾಗಿ ಜುಲೈ 23ರ ತನಕ ರೆಡ್ ಆಲರ್ಟ್ ಜಾರಿಯಲ್ಲಿರುತ್ತದೆ.
ಈ ಹಿಂದೆ ಜುಲೈ18ರವರೆಗೂ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಇದೀಗ ಜುಲೈ 23ರ ತನಕ ಮಳೆಯ ಎಚ್ಚರ ನೀಡಲಾಗಿದೆ. ಕೇವಲ ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡಿನ ನೀಲಗಿರಿಯ ಪಶ್ಚಿಮ ಘಟ್ಟ, ಗುಜರಾತ್ ನಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನು ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಜುಲೈ 18ರಂದು ಯೆಲ್ಲೋ ಅಲರ್ಟ್ ಹಾಗೂ ಜುಲೈ 16 ಮತ್ತು 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿತ್ತು.
ಇದೀಗ ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ಯಾದಗಿರಿ,ವಿಜಯಪುರ, ಬಾಗಲಕೋಟೆ, ಕೊಪ್ಪಳ. ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಮೈಸೂರು, ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಜುಲೈ 21 ಮತ್ತು 22 ರಂದು ಯಲ್ಲೋ ಆಲರ್ಟ್ ಘೋಷಿಸಲಾಗಿದೆ.
Discussion about this post