ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಹಾಗೂ ಉಗ್ರರ ನಡುವೆ ಮುಖಾಮುಖಿ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ.
ಬಂಡಿಪೋರಾದ ಸುಮ್ಬ್ಲಾರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಸ್ಥಳಕ್ಕೆ ಧಾವಿಸಿದ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಶರಣಾಗುವಂತೆ ಎಚ್ಚರಿಕೆ ಕೊಟ್ಟರು ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ವೇಳೆ ಭದ್ರತಾ ಪಡೆಗಳು ಉಗ್ರರಿಗೆ ದಿಟ್ಟ ಉತ್ತರ ಕೊಟ್ಟಿದೆ. ಈ ವೇಳೆ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇನ್ನು ಈ ಕಾರ್ಯಾಚರಣೆಯಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಉಗ್ರರ ಗುರುತನ್ನು ಪತ್ತೆ ಹಚ್ಚಲಾಗುತ್ತಿದ್ದು. ಇನ್ನುಳಿದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ,
Discussion about this post