ಕೇರಳ : ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಲಯಾಳಂ ಚಿತ್ರರಂಗದ ನಟಿ ಶರಣ್ಯ ಶಶಿ ಮೃತಪಟ್ಟಿದ್ದಾರೆ. 35 ವರ್ಷದ ಶರಣ್ಯ ಅವರಲ್ಲಿ 2012ರಲ್ಲಿ ಬ್ರೈನ್ ಟ್ಯೂಮರ್ ಕೂಡಾ ಪತ್ತೆಯಾಗಿತ್ತು. ಬಳಿಕ ಹಲವು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಕ್ಯಾನ್ಸರ್ ವಿರುದ್ಧ ನಡೆಸಿದ ಹೋರಾಟಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು.
ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದ ವಿರುದ್ಧ ಹೋರಾಡುತ್ತಿದ್ದ ಅವರಿಗೆ 11 ಸಲ ಅಪರೇಷನ್ ನಡೆಸಲಾಗಿತ್ತು. ಮೇ ತಿಂಗಳಲ್ಲಿ ಕೊರೋನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಐಯಿಯುನಲ್ಲಿ ಚಿಕಿತ್ಸೆ ಪಡೆದಿದ್ದರು.
ನಂತರ ಜೂನ್ ತಿಂಗಳಲ್ಲಿ ಮನೆಗೆ ಮರಳಿದ್ದರೂ ಕೂಡಾ. ಇದಾದ ಕೆಲವೇ ನಗಳಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಯಿತು. ಹೀಗಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಅವರು ಮೃತಪಟ್ಟಿದ್ದಾರೆ
Discussion about this post