ತುಮಕೂರು : ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಶಾಕ್ ತಗುಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಕರೀಕೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಚಂದನ್ ( 16) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶಶಾಂಕ್ (16) ಹಾಗೂ ಪವನ್ (22) ಗಂಭೀರವಾಗಿ ಗಾಯಗೊಂಡಿದ್ದು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂವರು ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸಲು ಹೋದಾಗ, ಕಂಬಕ್ಕೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಚಂದನ್ ಮೃತಪಟ್ರೆ, ಶಶಾಂಕ್ ಮತ್ತು ಪವನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮೂವರು ಕರಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಶಾಲೆಗೆ ಧ್ವಜಸ್ತಂಭ ನಿಲ್ಲಿಸಲು ತೆರಳಿದ್ದರು. ಶಿಕ್ಷಕರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದಾರೆ.
ಈ ನಡುವೆ ಗಾಯಾಳುಗಳನ್ನು ಮಾಜಿ ಡಿಸಿಎಂ ಭೇಟಿ ಮಾಡಿದ್ದು, ಗಾಯಾಳುಗಳಿಗೆ ಆರೋಗ್ಯ ವಿಚಾರಿಸಿ, ಮೃತ ಬಾಲಕನ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಜೊತೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ನೋಡಿಕೊಳ್ಳಲಿದೆ ಅಂದಿದ್ದಾರೆ.
Discussion about this post