ರಾಜಸ್ಥಾನ : ಜೋಧ್ ಪುರ ಜಿಲ್ಲೆಯ ಶೇರಗಢದಲ್ಲಿ 12 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಪ್ರಕರಣ ನಡೆದಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ ಸಂಗೀತಾ ಬೆನಿವಾಲ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಈ ಬಗ್ ವೈದ್ಯರೊಂದಿಗೆ ಮಾತುಕತೆ ನಡೆಸಿರುವ ಅವರು ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಗೆ ಅಪ್ರಪ್ತಾನೇ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ಗೊತ್ತಾಗಿದೆ. ಬಾಲಕಿಗೆ ಚಿಕಿತ್ಸೆ ನೀಡುವಂತೆ ಆಸ್ಪತ್ರೆಗೆ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದು, ಆರೋಪಿ ಶೀಘ್ರದಲ್ಲೇ ಪತ್ತೆಯಾಗಲಿದ್ದಾನೆ ಅಂದಿದ್ದಾರೆ.
ಇನ್ನು ಇದೊಂದು ಅಕಾಲಿಕ ಹೆರಿಗೆಯಾಗಿದ್ದು, ಮಗುವಿನ ಸ್ಥಿತಿ ಬಗ್ಗೆ ಆಸ್ಪತ್ರೆ ಯಾವುದೇ ಮಾಹಿತಿಗಳನ್ನು ಬಿಟ್ಟುಕೊಟ್ಟಿಲ್ಲ. ಈ ನಡುವೆ ಬಾಲಕಿ ಮೇಲೆ ಮೂವರು ಅಪ್ರಾಪ್ತರು ಅತ್ಯಾಚಾರ ನಡೆಸಿದೆ ಅನ್ನುವ ಅಘಾತಕಾರಿ ಮಾಹಿತಿ ಹೊರ ಬಿದ್ದಿದೆ.
Discussion about this post